ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

ಅಬ್ದುಲ್ ಹತ್ಯೆ | ಭುಗಿಲೆದ್ದ ಆಕ್ರೋಶ: ಫರಂಗಿಪೇಟೆ, ಬಿ.ಸಿ.ರೋಡ್ ಅಘೋಷಿತ ಬಂದ್‌

Published : 28 ಮೇ 2025, 23:30 IST
Last Updated : 28 ಮೇ 2025, 23:30 IST
ಫಾಲೋ ಮಾಡಿ
Comments
ಅಂತಿಮ ನಮನ:
ಅಂತಿಮ ಯಾತ್ರೆ ಸಾಗಿದ ಮಾರ್ಗದಲ್ಲಿನ ಮಸೀದಿಗಳ ಬಳಿ ಅಲ್ಲಲ್ಲಿ ಸೇರಿದ್ದ ಜನರು ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದರು. ಪಾರ್ಥಿವ ಶರೀರ ಫರಂಗಿಪೇಟೆಯ ತಲುಪುವಾಗ ಅಲ್ಲಿನ ಬಹುತೇಕ ಅಂಗಡಿಗಳು ಮುಚ್ಚಿದ್ದವು. ಸ್ಥಳದಲ್ಲಿ ಸೇರಿದ್ದ ಆಕ್ರೋಶಿತರ ಗುಂಪೊಂದು ಕೆಲಕಾಲ ರಸ್ತೆ ತಡೆ ನಡೆಸಿತು. ಅವರನ್ನು  ಸಮಾಧಾನಪಡಿಸಲು ಪೊಲೀಸರು ಹರಸಾಹಸಪಟ್ಟರು.
ಅಬ್ದುಲ್ ರಹಿಮಾನ್ 
ಅಬ್ದುಲ್ ರಹಿಮಾನ್ 
ಅಬ್ದುಲ್ ರಹಿಮಾನ್ ಅವರ ಪಾರ್ಥಿವ ಶರೀರ ಬಂಟ್ವಾಳ ತಾಲ್ಲೂಕಿನ  ಬಡಗಬೆಳ್ಳೂರು ಗ್ರಾಮದ  ಕೊಳತ್ತಮಜಲಿನಲ್ಲಿರುವ ಅವರ ಮನೆಗೆ ತಲುಪಿದಾಗ ಸೇರಿದ್ದ ಜನರು         
ಅಬ್ದುಲ್ ರಹಿಮಾನ್ ಅವರ ಪಾರ್ಥಿವ ಶರೀರ ಬಂಟ್ವಾಳ ತಾಲ್ಲೂಕಿನ  ಬಡಗಬೆಳ್ಳೂರು ಗ್ರಾಮದ  ಕೊಳತ್ತಮಜಲಿನಲ್ಲಿರುವ ಅವರ ಮನೆಗೆ ತಲುಪಿದಾಗ ಸೇರಿದ್ದ ಜನರು         
ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ? 
ಜಿಲ್ಲೆಯಲ್ಲಿ ಕೋಮು ಆಧರಿತ ಹತ್ಯೆಗಳಿಗೆ ಕಡಿವಾಣ ಹಾಕಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ. ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ‘ಜಿಲ್ಲೆಯಲ್ಲಿ ಧರ್ಮಾಧಾರಿತವಾಗಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ತಡೆಯಲು ಗೃಹ ಇಲಾಖೆ ವಿಫಲವಾಗಿದೆ. ಪ್ರಚೋದನಕಾರಿ ಭಾಷಣ ಮಾಡಿ ಧರ್ಮಗಳ ನಡುವೆ ಗಲಭೆ ಸೃಷ್ಟಿಸುವವರ ವಿರುದ್ಧ ಕ್ರಮವಹಿಸಲು ಇಲಾಖೆಗೆ ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು. ‘ಬಂದ್‌ಗೆ ಕರೆ ನೀಡಿ ಸಾರ್ವಜನಿಕ  ಆಸ್ತಿಪಾಸ್ತಿ ನಷ್ಟಕ್ಕೆ ಕಾರಣರಾದವರ ವಿರುದ್ಧವೂ ಕ್ರಮ ಆಗುತ್ತಿಲ್ಲ. ಇದರಿಂದ ಬೇಸತ್ತು ಬೂತ್‌ ಮಟ್ಟದಿಂದ ರಾಜ್ಯಮಟ್ಟದವರೆಗೆ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಸಮುದಾಯದ ಮುಖಂಡರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದೇವೆ’ ಎಂದು ಶಾಹುಲ್ ಹಮೀದ್ ‘ಪ್ರಜಾವಾಣಿ’ಗೆ ತಿಳಿಸಿದರು. ಪಕ್ಷದ ಸ್ಥಳೀಯ ಘಟಕಗಳ ಪ್ರಮುಖರು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. 
ಮೂವರು ಆರೋಪಿಗಳು ವಶಕ್ಕೆ?
ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಕಲಂದರ್ ಶಾಫಿ ಮೇಲಿನ ಹಲ್ಲೆ ಬಗ್ಗೆ ಮಹಮ್ಮದ್ ನಿಸಾರ್ ದೂರು ನೀಡಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೀಪಕ್‌, ಸುಮಿತ್ ಸೇರಿ 15 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈ ಸಂಬಂಧ ದೀಪಕ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳನ್ನೆಲ್ಲ ಶೀಘ್ರವೇ ಬಂಧಿಸುತ್ತೇವೆ’ ಎಂದು ಎಡಿಜಿಪಿ (ಕಾನೂನು ಸುವ್ಯವಸ್ಥೆ) ಆರ್.ಹಿತೇಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು. ‘ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.ಈ ಸಲುವಾಗಿ ಪೊಲೀಸರ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್‌. ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT