ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎನ್‌ಇಪಿ ರದ್ದತಿಯಿಂದ ಉನ್ನತ ಶಿಕ್ಷಣಕ್ಕೆ ಆಪತ್ತು: ಅರುಣ ಶಹಾಪುರ

Published 11 ಮೇ 2024, 5:40 IST
Last Updated 11 ಮೇ 2024, 5:40 IST
ಅಕ್ಷರ ಗಾತ್ರ

ಮಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ–2020 (ಎನ್‌ಇಪಿ) ಭಾಗವಾಗಿದ್ದ ನಾಲ್ಕು ವರ್ಷಗಳ ಪದವಿ ಸ್ಥಗಿತಗೊಳಿಸಿ, 3 ವರ್ಷಗಳ ಪದವಿ ಕೋರ್ಸ್‌ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲ, ವಿಶ್ವವಿದ್ಯಾಲಯಗಳಿಗೂ ಆಪತ್ತು ತರಲಿದೆ’ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಅರುಣ ಶಹಾಪುರ ಎಚ್ಚರಿಸಿದರು.

ಪೀಪಲ್ಸ್‌ ಫೋರಂ ಫಾರ್‌ ಕರ್ನಾಟಕ ಎಜುಕೇಷನ್‌ ವತಿಯಿಂದ ಶುಕ್ರವಾರ ಇಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ–2020 ಜಾರಿಗೊಳಿಸದಿದ್ದರೆ ಸಂಶೋಧನೆಗಾಗಿ ಕೇಂದ್ರದಿಂದ ಬರುವ ಅನುದಾನ ವಿಶ್ವವಿದ್ಯಾಲಯಗಳಿಗೆ ಕೈತಪ್ಪುವ ಸಾಧ್ಯತೆ ಇದೆ ಎಂದೂ ಅವರು ಎಚ್ಚರಿಸಿದರು.

‘ನಾಲ್ಕು ವರ್ಷಗಳ ಪದವಿ ಪೂರೈಸಿದವರು ನೇರವಾಗಿ ಪಿಎಚ್‌.ಡಿಗೆ ಪ್ರವೇಶ ಪಡೆಯಬಹುದು ಎಂದು ಯುಜಿಸಿ ಸುತ್ತೋಲೆ ಹೊರಡಿಸಿದೆ. ಈ ಹೊತ್ತಿನಲ್ಲಿ ರಾಜ್ಯ  ಸರ್ಕಾರದ ಈ ನಿರ್ಧಾರ ಸರಿಯಲ್ಲ. ಎನ್‌ಇಪಿ ಜಾರಿಗೂ ಮೊದಲು ಪ್ರವೇಶ ಪಡೆದವರು, ಎನ್‌ಇಪಿ ಅಡಿ ಪ್ರವೇಶ ಪಡೆದವರು ಹಾಗೂ ಈಗ ಎಸ್‌ಇಪಿ ಅಡಿ ಪ್ರವೇಶ ಪಡೆಯುವವರಿಗೆ ಹೀಗೆ ಮೂರು ರೀತಿಯ ಪರೀಕ್ಷೆಗಳನ್ನು ನಡೆಸಬೇಕಾಗುತ್ತದೆ. ಅದಕ್ಕೆ ನಮ್ಮ ವಿಶ್ವವಿದ್ಯಾಲಯಗಳು ಆರ್ಥಿಕವಾಗಿ ಸಮರ್ಥವಾಗಿವೆಯೇ’ ಎಂದು ಅವರು ಪ್ರಶ್ನಿಸಿದರು.

ಪಠ್ಯ ಪರಿಷ್ಕರಣೆ: ದೇಶದಲ್ಲಿ 2023ರ ಪಠ್ಯಕ್ರಮ ಚೌಕಟ್ಟಿನ ಆಧಾರದ ಮೇಲೆ ಪಠ್ಯಕ್ರಮವನ್ನು ಪರಿಷ್ಕರಿಸಲಾಗುತ್ತಿದೆ. ಆದರೆ, ರಾಜ್ಯ ಸರ್ಕಾರ ಶಾಲಾ ಪಠ್ಯಕ್ರವನ್ನು 2007ರ ಪಠ್ಯಕ್ರಮದ ಚೌಕಟ್ಟಿನ ಆಧಾರದ ಮೇಲೆ ಪರಿಷ್ಕರಿಸುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದು ಅವರು ಹೇಳಿದರು. ಶೈಕ್ಷಣಿಕ ಅಗತ್ಯತೆಗೆ ತಕ್ಕಂತೆ ಪಠ್ಯಕ್ರಮವನ್ನು ಇನ್ನೂ ಉತ್ತಮಪಡಿಸುವುದಾದರೆ ಸರಿ, ರಾಜಕೀಯ ಕಾರಣಕ್ಕಾಗಿ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣೆ ಮಾಡುತ್ತಿರುವುದು ಸರಿಯಲ್ಲ ಎಂದು ಅವರು ಪ್ರತಿಪಾದಿಸಿದರು.

ಪೀಪಲ್ಸ್‌ ಫೋರಂ ಫಾರ್‌ ಕರ್ನಾಟಕ ಎಜ್ಯುಕೇಶನ್‌ನ
ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಂಚಾಲಕ ಪ್ರೊ. ರಾಜಶೇಖರ ಹೆಬ್ಬಾರ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ನ ಮಾಜಿ ಸದಸ್ಯ ರಮೇಶ ಕೆ. ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT