ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿ ಇಲಾಖೆ ಎಂಜಿನಿಯರ್ ಎಸ್.ಮಹದೇವಪ್ಪ ಮನೆ ಮೇಲೆ ಎಸಿಬಿ ದಾಳಿ

Last Updated 12 ಜೂನ್ 2019, 5:19 IST
ಅಕ್ಷರ ಗಾತ್ರ

ಮಂಗಳೂರು:ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಹಾಯಕ ಎಂಜಿನಿಯರ್ ಎಸ್.ಮಹದೇವಪ್ಪ ಅವರ ಮನೆ ಮತ್ತು ಕಚೇರಿಯ ಮೇಲೆ ಬುಧವಾರ ಬೆಳಿಗ್ಗೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಕುರಿತು ಶೋಧ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ‌ ನಿರ್ದೇಶಕರ ಕಚೇರಿಯಲ್ಲಿ ಮಹದೇವಪ್ಪ ಸಹಾಯಕ ಎಂಜಿನಿಯರ್ ಹುದ್ದೆಯಲ್ಲಿದ್ದಾರೆ. ಅವರ ಕಚೇರಿ ಮತ್ತು ಕದ್ರಿ ಕಂಬಳದಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಎಸಿಬಿಯ ಪಶ್ಚಿಮ ವಲಯ ಎಸ್ ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇದೇ ಅಧಿಕಾರಿಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಕಾರ್ಯಾಚರಣೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT