ಬುಧವಾರ, ಜೂನ್ 16, 2021
22 °C

ಸುಲ್ಕೇರಿ: ಬೈಕ್ ಸ್ಕಿಡ್– ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಸುಲ್ಕೇರಿ ಜಂತಿಗೋಳಿ ನಿವಾಸಿ ಪ್ರಸಾದ್ (24) ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.

ಜಂತಿಗೋಳಿ ಅಣ್ಣಿ ಪೂಜಾರಿ ಮತ್ತು ಪುಷ್ಪಾ ದಂಪತಿಯ ಪುತ್ರನಾದ ಅವರು ಬೆಳ್ತಂಗಡಿಯ ಸ್ಟುಡಿಯೊ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮನೆ ಸಮೀಪ ಬೈಕ್ ಸ್ಕಿಡ್ ಆಗಿ, ಕಾಂಕ್ರೀಟ್ ರಸ್ತೆಗೆ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿತ್ತು. ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪ್ಪಿದ್ದಾರೆ.

ಮೃತರಿಗೆ ತಂದೆ, ತಾಯಿ, ಸಹೋದರ, ಸಹೋದರಿ ಇದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು