ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ

Published 11 ಡಿಸೆಂಬರ್ 2023, 17:16 IST
Last Updated 11 ಡಿಸೆಂಬರ್ 2023, 17:16 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಸುರತ್ಕಲ್: ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ದಾಟಲು ಯತ್ನಿಸುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಢಿಕ್ಕಿಯಾಗಿ ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್‍ನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಸ್ಥಳೀಯ ಕಾಲೇಜಿನ ಎರಡನೇ ವರ್ಷದ ‘ಹೆಲ್ತ್ ಅಲೈಡ್ ಸೈನ್ಸ್’ ವಿಭಾಗದ ಕೇರಳ ಮೂಲದ ವಿದ್ಯಾರ್ಥಿನಿಯರಾದ ಭಾವನಾ (19), ಮಯೂರಿ (19) ಗಂಭೀರ ಗಾಯಗೊಂಡವರು.

ಕಾಲೇಜಿಗೆ ಹೋಗಲು ಸುರತ್ಕಲ್‌ನಲ್ಲಿರುವ ಪಿ.ಜಿ.ಯಿಂದ ಹೊರಟು ನಟರಾಜ್ ಟಾಕೀಸ್ ಬಳಿಯ ಬಸ್ ನಿಲ್ದಾಣದ ಬಳಿ ಹೆದ್ದಾರಿ ದಾಟಲು ಯತ್ನಿಸಿದ ವೇಳೆ  ‘ಒನ್‌ವೇ’ಯಲ್ಲಿ ಬಂದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿಯರ ತಲೆ, ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಸುತ್ತಮುತ್ತಲಿನ ಅಂಗಡಿಯವರು, ಬಾಡಿಗೆ ವಾಹನದ ಚಾಲಕರು ಅವರನ್ನು ಆಸ್ಪತ್ರೆಗೆ ಸೇರಿಸಿದರು. ಇಬ್ಬರೂ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ಉತ್ತರ ಸಂಚಾರ ಠಾಣಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT