ಬಂಟ್ವಾಳ: ಕೆಲವು ದಿನಗಳ ಹಿಂದೆ ಬೈಕ್ ಅಪಘಾತದಿಂದ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನರಿಕೊಂಬು ಗ್ರಾಮ ಪಂಚಾಯಿತಿ ಪ್ರಭಾರ ಅಭಿವೃದ್ಧಿ ಅಧಿಕಾರಿ ಶಿವು ಜನಗೊಂಡ (28) ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಅಪಘಾತದಿಂದ ಅವರ ಸೊಂಟ ಮತ್ತು ಹೊಟ್ಟೆಯ ಒಳ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ, ತಡರಾತ್ರಿ ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ ಶಿವು ಜನಕೊಂಡ ಅವಿವಾಹಿತರಾಗಿದ್ದು, ಬಿ.ಸಿ.ರೋಡಿನ ಕೈಕುಂಜೆಯಲ್ಲಿ ವಾಸವಾಗಿದ್ದರು. ಮೂರೂವರೆ ವರ್ಷಗಳ ಹಿಂದೆ ನರಿಕೊಂಬು ಗ್ರಾಮ ಪಂಚಾಯಿತಿಗೆ ಕಾರ್ಯದರ್ಶಿಯಾಗಿ ಬಂದು ಬಳಿಕ ಪ್ರಭಾರ ಪಿಡಿಒ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.