ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಲಶೇಖರ ಸಮೀಪ ಸ್ಕೂಟರ್ ಡಿಕ್ಕಿ: ವಿದ್ಯಾರ್ಥಿ ಸಾವು

Published 10 ಫೆಬ್ರುವರಿ 2024, 6:06 IST
Last Updated 10 ಫೆಬ್ರುವರಿ 2024, 6:06 IST
ಅಕ್ಷರ ಗಾತ್ರ

ಮಂಗಳೂರು: ನಗರದ ಕುಲಶೇಖರ ಸಮೀಪದ ಬಿಕರ್ನಕಟ್ಟೆಯಲ್ಲಿ ರಸ್ತೆ ಬದಿಯ ಕಂಬಕ್ಕೆ ಸ್ಕೂಟರ್ ಡಿಕ್ಕಿ ಹೊಡೆದು, ಎಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಕುಲಶೇಖರ ನಿವಾಸಿ, ವಾಮಂಜೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಟೆರೆನ್ಸ್ ಡಿಸೋಜ

(21) ಮೃತಪಟ್ಟವರು. ಗುರುವಾರ ರಾತ್ರಿ ಪಾಲಕರೊಂದಿಗೆ ಕುಲಶೇಖರ ಕೋರ್ಡೆಲ್ ಚರ್ಚ್‌ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ನಂತರ ಸ್ಕೂಟರ್‌ನಲ್ಲಿ ಮನೆಗೆ ಹೋಗುತ್ತಿರುವಾಗ ಬಿಕರ್ನಕಟ್ಟೆಯ ಬಳಿ ನಿಯಂತ್ರಣ ತಪ್ಪಿ ಬಿದ್ದಿದ್ದು, ಕಂಬಕ್ಕೆ ತಲೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಸಂಚಾರ ಪೊಲೀಸರು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT