ಮಂಗಳೂರು: ಪೊಲೀಸ್ ಅಧಿಕಾರಿಗಳು, ಮಾಧ್ಯಮದವರು ಹಾಗೂ ರಾಜಕೀಯ ವ್ಯಕ್ತಿಗಳ ಹೆಸರುಹೇಳಿ ದುರುಪಯೋಗ ಮಾಡಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಕನಕ ವಾಟ್ಸ್ ಅ್ಯಪ್ ಗ್ರೂಪ್‌ನ ಅಡ್ಮಿನ್ ರಶೀದ್ ಕುಂಡಡ್ಕ ಅಲಿಯಾಸ್ ಅಬ್ದುಲ್ ರಶೀದ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕುಖ್ಯಾತ ರೌಡಿ ಹಾಗೂ ಜ್ಯುವೆಲ್ಲರಿ ದರೋಡೆ ಪ್ರಕರಣವೊಂದರ ಪ್ರಮುಖ ಆರೋಪಿ ಮುತ್ತಾಸಿಮ್ ಅಲಿಯಾಸ್ ತಸ್ಲಿಂ ಎಂಬಾತನ ಕೊಲೆ ಪ್ರಕರಣದಲ್ಲಿರುವ ವ್ಯಕ್ತಿಯೊಬ್ಬನ ಹೆಸರನ್ನು ಪ್ರಕರಣದಿಂದ ತೆಗೆಸುತ್ತೇನೆ. ತನಗೆ ಪೊಲೀಸ್ ಅಧಿಕಾರಿಗಳ ಪರಿಚಯವಿದೆ ಎಂದು ಹೇಳಿ ₹20 ಲಕ್ಷ ನೀಡುವಂತೆ ಬೇಡಿಕೆಯಿಟ್ಟಿದ್ದ. ನಂತರ ₹ 4 ಲಕ್ಷ ಹಣವನ್ನು ಸುಲಿಗೆ ಮಾಡಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಯ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಆರೋಪಿ ಬೆಳ್ತಂಗಡಿ ತಾಲ್ಲೂಕು ಪುತ್ತಿಲದ ನಿವಾಸಿ ಅಬ್ದುಲ್ ರಶೀದ್ ಅಲಿಯಾಸ್ ರಶೀದ್ ಕುಂಡಡ್ಕ ಎಂಬಾತನನ್ನು ವಶಕ್ಕೆ ಪಡೆದು, ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

ಈತನು “ಕನಕ” ಎಂಬ ವಾಟ್ಸ್ಅಪ್ ಗ್ರೂಪ್ ನ ಅಡ್ಮಿನ್ ಆಗಿದ್ದು, ಈ ಗ್ರೂಪ್ ನಲ್ಲಿ ಸರ್ಕಾರಿ ಅಧಿಕಾರಿಗಳನ್ನು, ರಾಜಕೀಯ ವ್ಯಕ್ತಿಗಳು, ಮಾಧ್ಯಮದವರನ್ನು ಸೇರಿಸಿಕೊಂಡಿದ್ದ. ನಂತರ ತನ್ನ ವಾಟ್ಸಪ್ ಗ್ರೂಪ್‌ನ ಹೆಸರನ್ನು ನಮೂದಿಸಿ, ಕರೆ ಮಾಡಿ ತನ್ನ ಪರಿಚಯವನ್ನು ಮಾಡಿಕೊಳ್ಳುತ್ತಿದ್ದ. ಆ ಪರಿಚಯವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರನ್ನು ನಂಬಿಸಿ ಹಣವನ್ನು ಸುಲಿಗೆ ಮಾಡುತ್ತಿದ್ದ. ಈತನ ವಿರುದ್ದ ಈ ಹಿಂದೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ಕೂಡಾ ಇದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ತಿಳಿಸಿದ್ದಾರೆ.

ಸಿಸಿಬಿ ಘಟಕದ ಇನ್ಸ್ ಪೆಕ್ಟರ್ಶಿವಪ್ರಕಾಶ್ ಆರ್.ನಾಯ್ಕ್, ಪಿಎಸ್ಐ ಎಚ್.ಡಿ. ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.