ಉಪ್ಪಿನಂಗಡಿ: ಕಡಬ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಮಹಿಳೆಯೊಬ್ಬರ ಮುಖಕ್ಕೆ ಆಕೆಯ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕಡಬ ಠಾಣಾ ಎಎಸ್‌ಐಯನ್ನು ಅಮಾನತುಗೊಳಿಸಲಾಗಿದೆ.

ಕೋಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ ಎಂಬಾತ ತನ್ನ ತಮ್ಮನ ಪತ್ನಿ ವಿಧವೆ ಹಾಗೂ ಆಕೆಯ ಪುತ್ರಿಯ ಮುಖಕ್ಕೆ ಆ್ಯಸಿಡ್ ಎರಚಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ ಚಂದ್ರಶೇಖರ್ ದೂರು ಸ್ವೀಕರಿಸದೇ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ದೂರು ಕೇಳಿ ಬಂದಿತ್ತು.

ಈ ಪ್ರಕರಣದ ತನಿಖೆ ನಡೆಸಿದ ಪುತ್ತೂರು ಡಿವೈಎಸ್ಪಿ ದಿನಕರ್ ಶೆಟ್ಟಿ ನೀಡಿದ ವರದಿಯನ್ನು ಆಧರಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.