ಶನಿವಾರ, ಮೇ 15, 2021
26 °C

ದ.ಕ: ಸಾವಿರದತ್ತ ಸಕ್ರಿಯ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ನಾಲ್ಕನೇ ದಿನವೂ 100 ರ ಗಡಿ ದಾಟಿದೆ. ಶನಿವಾರ ಮತ್ತೆ 137 ಜನರಿಗೆ ಕೋವಿಡ್–19 ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣ ಗಳ ಸಂಖ್ಯೆ ಸಾವಿರದತ್ತ ಸಾಗಿದೆ.

ಇದುವರೆಗೆ ಜಿಲ್ಲೆಯಲ್ಲಿ 6.59 ಲಕ್ಷ ಮಂದಿಯ ಗಂಟಲು ದ್ರವ ತಪಾಸಣೆ ನಡೆಸಿದ್ದು, 6.22 ಲಕ್ಷ ಜನರ ವರದಿ ನೆಗೆಟಿವ್‌ ಬಂದಿದೆ. 36,652 ಮಂದಿಗೆ ಕೋವಿಡ್–19 ದೃಢವಾಗಿದ್ದು, 34,994 ಜನರು ಗುಣಮುಖರಾಗಿದ್ದಾರೆ. ಸದ್ಯ 965 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 743 ಜನರು ಮೃತಪಟ್ಟಿದ್ದಾರೆ.

ದಂಡ: ಮಾಸ್ಕ್‌ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 44,409 ಪ್ರಕರಣ ಪತ್ತೆ ಮಾಡಲಾಗಿದ್ದು, ₹46.15 ಲಕ್ಷ ದಂಡ ವಸೂಲಿ ಮಾಡಲಾಗಿದೆ.

286 ಪ್ರಕರಣ: ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 286 ಮಂದಿಗೆ ಕೋವಿಡ್–19 ದೃಢಪಟ್ಟಿದೆ. 156 ಮಂದಿ ಗುಣಮುಖರಾಗಿದ್ದಾರೆ. ‌ಸದ್ಯ 2,194 ಸಕ್ರಿಯ ಪ್ರಕರಣ ಗಳಿವೆ. ಇದುವರೆಗೆ 34,113 ಮಂದಿಗೆ ಕೋವಿಡ್ ದೃಢ ಪಟ್ಟಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು