ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರ ನೇಮಕ: ಜುಬಿನ್

Published 17 ಮೇ 2024, 11:22 IST
Last Updated 17 ಮೇ 2024, 11:22 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹಾಗೂ ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಅವರು ಸಾರ್ವಜನಿಕರ ಮನವಿಗೆ ಸ್ಪಂದಿಸಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.

ಜಿಲ್ಲಾಧಿಕಾರಿ ಭೇಟಿ ಸಂದರ್ಭ ಆಸ್ಪತ್ರೆಯ ಕೆಲಸದ ಅವಧಿ ಮುಗಿದು ಬಾಗಿಲು ಮುಚ್ಚಿತ್ತು. ಅಶೋಕ್ ನೆಕ್ರಾಜೆ ಹಾಗೂ ಸುಬ್ರಹ್ಮಣ್ಯ ಗ್ರಾಮಪಂಚಾಯಿತಿ ಉಪಾಧ್ಯಕ್ಷ ವೆಂಕಟೇಶ್ ಎಚ್.ಎಲ್., ಕುಕ್ಕೆ ಸುಬ್ರಹ್ಮಣ್ಯಕ್ಕೆ ವೈದ್ಯರ ಅಗತ್ಯವಿದೆ. 24 ಗಂಟೆಯೂ ಆಸ್ಪತ್ರೆ ತೆರೆದಿರಬೇಕು. ವೈದ್ಯರು ಹಾಗೂ ಸಿಬ್ಬಂದಿಯನ್ನು ಒದಗಿಸಬೇಕು ಎಂದು ಮನವಿ ಮಾಡಿದರು.

ಹೆಚ್ಚುವರಿ ವೈದ್ಯರು, ಸಿಬ್ಬಂದಿಯನ್ನು ನೇಮಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ಸುಳ್ಯ ತಹಶೀಲ್ದಾರ್ ಮಂಜುನಾಥ ಜಿ., ಕಡಬ ತಹಶೀಲ್ದಾರ್ ಪ್ರಭಾಕರ ಕಜೂರೆ, ಪುತ್ತೂರು ತಹಶೀಲ್ದಾರ್ ಕುಞಿ ಅಹ್ಮದ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್, ಕಡಬ ಕಂದಾಯ ನಿರೀಕ್ಷಕ ಪೃಥ್ವಿಕುಮಾರ್, ಪಂಜ ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ, ಕಡಬ ಉಪ ತಹಶೀಲ್ದಾರ್ ಮನೋಹರ್ ಕೆ.ಟಿ., ಸುಳ್ಯ ನ.ಪಂ.ಮುಖ್ಯಾಧಿಕಾರಿ ಬಿ.ಎಂ.ಡಾಂಗೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೋನಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT