ಮಂಗಳೂರು: ಕೇರಳ ಕರ್ನಾಟಕ ಗಡಿ ಪ್ರದೇಶವಾದತಲಪಾಡಿಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ, ಕೊರೊನಾ ನೆಗೆಟಿವ್ ವರದಿ ಇಲ್ಲದೇ ಕರ್ನಾಟಕ ಗಡಿ ಪ್ರವೇಶಕ್ಕೆ ಅನುಮತಿ ನೀಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಲಪಾಡಿ ಗಡಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಅವರು, ಗಡಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಸೇರಿ ತಪಾಸಣೆ ಬಗ್ಗೆ ಮಾಹಿತಿ ಪಡೆದರು. ನೆಗೆಟಿವ್ ವರದಿ ಇಲ್ಲದೇ ಗಡಿ ಪ್ರವೇಶ ಕೊಡಬೇಡಿ ಎಂದು ಸೂಚಿಸಿದ್ದು, ಪೊಲೀಸ್ ಅಧಿಕಾರಿಗಳು ಮತ್ತು ದ.ಕ ಜಿಲ್ಲಾಧಿಕಾರಿಗಳಿಗೆ ಇನ್ನಷ್ಟುಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು, ಪ್ರತಾಪ್ ರೆಡ್ಡಿ ಅವರಿಗೆ ಗಡಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ, ತಪಾಸಣೆ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಮಂಗಳೂರು ಕಮಿಷನರ್ ಶಶಿಕುಮಾರ್, ಎಸ್ಪಿ ಖುಷಿಕೇಷ್ ಸೋನಾವಣೆ ಇದ್ದರು.

ತಲಪಾಡಿ ಗಡಿಯಲ್ಲಿ ತುರ್ತು ಅಗತ್ಯ ವಾಹನಗಳನ್ನು ಹೊರತು ಪಡಿಸಿ ಇತರ ವಾಹನ ಸಂಚಾರಕ್ಕೆ ಇಂದಿನಿಂದ ಸಂಪೂರ್ಣ ನಿರ್ಬಂಧ ಹೇರಲಾಗಿದ್ದು, ಕೇರಳದಿಂದ ರಾಜ್ಯಕ್ಕೆ ಪ್ರವೇಶ ನಿಷೇಧವನ್ನು ಯುಡಿಎಫ್ ವಿರೋಧಿಸಿ ಸೋಮವಾರ ಪ್ರತಿಭಟಿಸಿದ್ದು, ಎಲ್‍ಡಿಎಫ್ ಹಾಗೂ ಸಂಯುಕ್ತ ಜನತಾ ದಳ ಸದಸ್ಯರು ಪ್ರತಿಭಟನೆ ನಡೆಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು ಜಂಟಿ ಕಾರ್ಯಾಚರಣೆನಡೆಸುತ್ತಿದ್ದು, 72 ಗಂಟೆಯ ಒಳಗೆ ಮಾಡಿಸಿದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದವರಿಗೆ ತಲಪಾಡಿ ಗಡಿಯಲ್ಲಿ ಪ್ರವೇಶ ನಿಷೇಧಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.