ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡ್ಯಾರ್‌: ಕಾರು ಡಿಕ್ಕಿ–ಬೈಕ್‌ ಸವಾರ ಸಾವು

Published 17 ಏಪ್ರಿಲ್ 2024, 5:20 IST
Last Updated 17 ಏಪ್ರಿಲ್ 2024, 5:20 IST
ಅಕ್ಷರ ಗಾತ್ರ

ಮಂಗಳೂರು:ನಗರದ ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಬಳಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಸೋಮವಾರ ರಾತ್ರಿ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೈಕ್‌ ಸವಾರ ಸಾವಿಯೊ ಮಹೇಶ್ ( 21 ವರ್ಷ) ಮೃತರು. ಸಹಸವಾರ ಪ್ರಣಮ್ ಶೆಟ್ಟಿ (18 ) ಗಾಯಗೊಂಡವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಯುವಕರಿಬ್ಬರು ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಗೇಟ್ ಎದುರಿನ ತೆರೆದ ರಸ್ತೆ ವಿಭಜಕದ ಬಳಿ ಬೈಕಿನಲ್ಲಿ ‘ಯು ಟರ್ನ್ ತೆಗೆದು ಮುಂದೆ ಸಾಗುತ್ತಿದ್ದರು. ಅಷ್ಟರಲ್ಲಿ ಬಿ.ಸಿ.ರೋಡ್‌ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಅವರ ಬೈಕಿಗೆ ಡಿಕ್ಕಿ ಹೊಡೆದಿತ್ತು. ಮಹೇಶ್ ಅವರ ಮೂಗು, ಎಡ ಕೈ, ಎಡ ಕಾಲಿನ ಗಂಟು ಹಾಗೂ ತಲೆಯ ಹಿಂಭಾಗಕ್ಕೆ ತೀವ್ರ ಸ್ವರೂಪದ ರಕ್ತ ಗಾಯಗಳಾಗಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಸ್ಥಳದಲ್ಲಿದ್ದವರು ಅವರನ್ನು ವಾಹನವೊಂದರಲ್ಲಿ ವೆನ್ಲಾಕ್‌ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಗಾಯಾಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ‌ ಸಹಸವಾರ ಪ್ರಣಮ್ ಶೆಟ್ಟಿ ಅವರ ತಲೆಗೆ, ಬಲಕೈಗೆ, ಎಡ ತೋಳಿಗೆ, ಎಡಮೊಣ ಕಾಲಿಗೆ  ತೀವ್ರ ಸ್ವರೂಪದ ಗಾಯಗಳಾಗಿದ್ದವು. ಅವರನ್ನು ನಾಸಿರ್ ಎಂಬುವರು ತಮ್ಮ ಆಟೊರಿಕ್ಷಾದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ನಾಸಿರ್ ನೀಡಿದ ದೂರಿನನ್ವಯ ಕಾರು ಚಾಲಕ ಶ್ಯಾಮ್ ಸುಧೀರ್ ವಿರುದ್ಧ ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT