ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲ್ಕಿ| ಫಲವತ್ತಾದ ಮಣ್ಣಿನಲ್ಲಿ ಕೃಷಿ ಸಂಪತ್ತು: ಶೆಟ್ಟಿಗಾರ್

Last Updated 20 ಫೆಬ್ರುವರಿ 2023, 4:18 IST
ಅಕ್ಷರ ಗಾತ್ರ

ಮೂಲ್ಕಿ: ಫಲವತ್ತಾದ ಮಣ್ಣಿನಲ್ಲಿ ಕೃಷಿ ಸಂಪತ್ತು ಬೆಳೆಸೋಣ, ಸಣ್ಣ ಜಾಗದ ಲ್ಲಿಯೂ ಕೃಷಿ ಬದುಕನ್ನು ಕಟ್ಟಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗೋಣ ಎಂದು ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಗುರಿಕಾರ ರತ್ನಾಕರ ಶೆಟ್ಟಿಗಾರ್ ಹೇಳಿದರು.

ಮೂಲ್ಕಿ ತಾಲ್ಲೂಕಿನ ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯೋಜನೆಯಲ್ಲಿ ನಡೆದ ತೋಟಗಾರಿಕೆ ಮಾಹಿತಿ ಶಿಬಿರ ಮತ್ತು ತೆಂಗು ಬೆಳಗಾರರ ಉತ್ಸಾದಕ ಸಂಸ್ಥೆಯ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಶಂಕರ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ಕೆ, ಕದ್ರಿ ಹಿಲ್ಸ್‌ ಲಯನ್ಸ್ ಕ್ಲಬ್‌ ಅಧ್ಯಕ್ಷೆ ಸುಮಿತ್ರಾ ವಿ. ಶೆಟ್ಟಿ, ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಲಕ್ಷ್ಮಣ್ ಗುರಿಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಸವಿತಾ ಬೆಳ್ಳಾಯರು, ಶ್ರೀ ವೀರಭದ್ರ ಮಹಮ್ಮಾಯಿ ದೇವಳದ ಮಹಿಳಾ ವೇದಿಕೆಯ ಅಧ್ಯಕ್ಷ ಭಾರತಿ, ವಿನಯ ತೆಂಗು ಬೆಳೆಗಾರರ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವಿಜಯ ಶೆಟ್ಟಿ, ಪ್ರಬಂಧಕಿ ಶುಭಾ, ಯುವಕ ಮಂಡಲದ ಅಧ್ಯಕ್ಷ ನವೀನ್ ಶೆಟ್ಟಿಗಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT