ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಉಳಿಸಲು ಆದ್ಯತೆ ನೀಡಿ: ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಕಿದು: ಮೆಗಾ ಕೃಷಿ ಮೇಳ ಹಾಗೂ ಕೃಷಿ ವಸ್ತುಪ್ರದರ್ಶನ ಮುಕ್ತಾಯ
Last Updated 24 ನವೆಂಬರ್ 2022, 11:44 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಭಾರತದ ಸಂಸ್ಕೃತಿ ಮತ್ತು ಕೃಷಿ ಅವಿನಾಭಾವ ಸಂಬಂಧ ಇದೆ. ಭಾರತವು ಅನಾದಿಕಾಲದಿಂದಲೂ ಕೃಷಿಯನ್ನೇ ಅವಲಂಬಿಸಿದ್ದು ಅದನ್ನು ಉಳಿಸಲು ಕೃಷಿಗೆ ಹೆಚ್ಚಿನ ಪ್ರಾಧಾನ್ಯತೆ ಕೊಡಬೇಕು. ಈ ಮೂಲಕ ಭಾರತದ ಕೃಷಿ ಪರಂಪರೆ ಮುಂದುವರಿಯಬೇಕು. ಯುವ ಜನತೆ ಕೃಷಿ ಕ್ಷೇತ್ರದಲ್ಲಿ ತೊಡಗಿಕೊಳ್ಳಬೇಕು ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.

ಬಿಳಿನೆಲೆ ಗ್ರಾಮದ ಕಿದು ಸಿ.ಪಿ.ಸಿ.ಆರ್.ಐ. ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಬುಧವಾರ ನಡೆದ 5 ದಿನಗಳ ಕೃಷಿ ಮೇಳ ಹಾಗೂ ಕೃಷಿ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಿ.ಪಿ.ಸಿ.ಆರ್.ಐ.ಯ ನಿರ್ದೇಶಕಿ ಡಾ.ಅನಿತಾ ಕರುನ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮತ್ತು ಸಂಸ್ಥೆಯ ಸಿಬ್ಬಂದಿಯನ್ನು ಗೌರವಿಸಲಾಯಿತು. ನಿವೃತ್ತ ವಿಜ್ಞಾನಿ ಡಾ.ಯುದುಕುಮಾರ್, ನಿವೃತ್ತ ಅಧಿಕಾರಿ ಮಂಜುನಾಥ್ ಶೆಟ್ಟಿ, ಸಹಾಯಕ ಆಡಳಿತಾಧಿಕಾರಿ ಟಿ.ಎಚ್. ನಾಗರಾಜ್ ಮಾತನಾಡಿದರು. ಡಾ.ನಿರಳ್ ಕೃಷಿ ಮೇಳದ 5 ದಿನದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಮನಮೋಹನ್ ಭಟ್ ಸ್ವಾಗತಿಸಿದರು. ನಾರಾಯಣ ನಾಯ್ಕ ವಂದಿಸಿದರು. ಡಾ. ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT