ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಎದುರಿಸಲು ಕಾಂಗ್ರೆಸ್‌ಗೆ ಮಾತ್ರ ಸಾಧ್ಯ: ರಮೇಶ್ ಚೆನ್ನಿತ್ತಲ

Published 5 ಡಿಸೆಂಬರ್ 2023, 13:50 IST
Last Updated 5 ಡಿಸೆಂಬರ್ 2023, 13:50 IST
ಅಕ್ಷರ ಗಾತ್ರ

ಕಾಸರಗೋಡು: ದೇಶದಲ್ಲಿ ಬಿಜೆಪಿಯನ್ನು ಎದುರಿಸಿ, ಕೋಮುವಿರೋಧಿ ನೀತಿ ಜಾರಿಗೊಳಿಸಲು ಕಾಂಗ್ರೆಸ್‌ಗೆ ಮಾತ್ರ ಸಾಧ್ಯ ಎಂದು ಎಐಸಿಸಿ ಮುಖಂಡ ರಮೇಶ್ ಚೆನ್ನಿತ್ತಲ ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಪಕ್ಷ ಸೋತಿರುವ ಬಗ್ಗೆ ಗಂಭೀರವಾಗು ಚಿಂತನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಇತರ ಸಚಿವರು ನಡೆಸುತ್ತಿರುವ ನವಕೇರಳ ಯಾತ್ರೆ ಸರಣಿ ರಾಜ್ಯಕ್ಕೆ ನಷ್ಟ ಉಂಟುಮಾಡುತ್ತಿದೆ. ಸರ್ಕಾರದ ಹಣವನ್ನು ರಾಜಕೀಯ ಲಾಭಕ್ಕಾಗಿ ಬಳಸುವ ಷಡ್ಯಂತ್ರವಿದು. ಅಹವಾಲು ಸ್ವೀಕಾರ ಎಂಬುದು ಪ್ರಹಸನವಾಗುತ್ತಿದ್ದು, ಇದನ್ನು ಜನ ಗಮನಿಸುತ್ತಿದ್ದಾರೆ ಎಂದರು.

ಮುಖಂಡರಾದ ಕೆ.ಪಿ.ಕುಂಞಿಕಣ್ಣನ್, ಕೆ.ನೀಲಕಂಠನ್, ಪಿ.ಕೆ.ಫೈಝಲ್, ಪಿ.ಎ.ಅಶ್ರಫಾಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT