ಶನಿವಾರ, ಸೆಪ್ಟೆಂಬರ್ 25, 2021
29 °C

ಏಮ್ಸ್ ಪಿಜಿ ಪ್ರವೇಶ ಪರೀಕ್ಷೆ: ದೀಕ್ಷಾಗೆ 8ನೇ ರ‍್ಯಾಂಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: 2021ನೇ ಸಾಲಿನ ಏಮ್ಸ್ ಪಿಜಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ದೀಕ್ಷಾ ಡಿ.ಎಸ್ ಅವರು ಅಖಿಲ ಭಾರತ ಮಟ್ಟದಲ್ಲಿ 8ನೇ ರ‍್ಯಾಂಕ್ ಗಳಿಸಿದ್ದಾರೆ.

ಅವರು ಪುತ್ತೂರು ತಾಲ್ಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಸಮೀಪದ ನಿವಾಸಿ ಶ್ಯಾಮ್ ಪ್ರಸಾದ್ ಡಿ. ಮತ್ತು ಜಯಶ್ರೀ ಎಸ್. ಪ್ರಸಾದ್ ದಂಪತಿ ಪುತ್ರಿ.ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಿಯು ಶಿಕ್ಷಣ ಪಡೆದಿದ್ದರು. ಬಳಿಕ ಮೈಸೂರಿನ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.