ಉಳ್ಳಾಲ: ಅಜ್ಜಿನಡ್ಕ ಬದ್ರಿಯಾ ವೆಲ್ಫೇರ್ ಸೊಸೈಟಿಯ 40ನೇ ವರ್ಷಾಚರಣೆ ಅಂಗವಾಗಿ ಕಂಕನಾಡಿ ಫಾದರ್ ಮಲ್ಲರ್ ಆಸ್ಪತ್ರೆ, ದೇರಳಕಟ್ಟೆ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಬ್ಲಡ್ ಡೋನರ್ಸ್ ಸಹಕಾರದಲ್ಲಿ ರಕ್ತದಾನ, ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಶಿಬಿರ ಅಜ್ಜಿನಡ್ಕದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಅಜ್ಜಿನಡ್ಕ ಬದ್ರಿಯಾ ಜುಮಾ ಮಸೀದಿಯ ಖತೀಬ್ ಝುಬೈರ್ ಫೈಝಿ ಉದ್ಘಾಟಿಸಿ, ಸೇವಾ ಕಾರ್ಯ ಶ್ಲಾಘನೀಯ ಎಂದರು.

ಅಧ್ಯಕ್ಷತೆ ವಹಿಸಿದ ಬದ್ರಿಯಾ ವೆಲ್ಫೇರ್ ಸೊಸೈಟಿ ಅಧ್ಯಕ್ಷ ಇರ್ಷಾದ್ ಅಜ್ಜಿನಡ್ಕ ಮಾತನಾಡಿ, ಕಳೆದೆರಡು ತಿಂಗಳಿಂದ ರಕ್ತ ಕೊರತೆ ಕಾಣಿಸಿದ್ದರಿಂದ ಸೊಸೈಟಿ ಆಶ್ರ ಯದಲ್ಲಿ ಶಿಬಿರ ನಡೆಸಿದ್ದು, ಅರ್ಹ ಆಸ್ಪತ್ರೆಗೆ ರಕ್ತ ನೀಡಲಾಗುವುದು ಎಂದರು.

ಬಂಟ್ವಾಳ ಸರ್ಕಾರಿ ಕಾಲೇಜಿನ ಉಪನ್ಯಾಸಕ ಎಸ್.ಎಂ. ಅಹ್ಮದ್, ಸಮಾಜ ಸೇವಕರಾದ ಇಬ್ರಾಹಿಂ ಕೊಮರಂಗಳ, ಯುಬಿಎಂ ರಹೀಂ ಉಚ್ಚಿಲ್, ಅಜ್ಜಿನಡ್ಕ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಸುಲೈಮಾನ್, ಕೋಟೆಕಾರ್ ಪಟ್ಟಣ ಪಂಚಾಯಿತಿ ಸದಸ್ಯರಾದ ಅಹ್ಮದ್ ಬಾವ ಅಜ್ಜಿನಡ್ಕ, ಇಸ್ಹಾಕ್, ಬದ್ರಿಯಾ ವೆಲ್ಫೇರ್ ಸೊಸೈಟಿ ಉಪಾಧ್ಯಕ್ಷ ಇಸ್ಮಾಯಿಲ್ ಸಿ.ಎಚ್., ರಕ್ತದಾನಿ ಅರ್ಷದ್ ಭಾಗವಹಿಸಿದ್ದರು.

ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ಬಾತಿಷ್ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಹನೀಫ್ ಎಸ್.ಬಿ. ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-29-860272321

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.