ಮಂಗಳೂರು: ಬಿಸಿಯೂಟ ನೌಕರರಿಗೆ ಏಪ್ರಿಲ್ನಿಂದ ಶಾಲೆ ಆರಂಭವಾಗುವವರೆಗೆ ವೇತನ ಪಾವತಿ ಹಾಗೂ ಇತರ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ಇಲ್ಲಿನ ಮಿನಿ ವಿಧಾನಸೌಧದ ಎದುರು ಧರಣಿ ನಡೆಸಲಾಯಿತು.

ಸಿಐಟಿಯು ಜಿಲ್ಲಾ ಘಟಕದ ಉಪಾಧ್ಯಕ್ಷ ವಸಂತ ಆಚಾರಿ ಮಾತನಾಡಿ, ‘ಬಿಸಿಯೂಟ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು ನಾಲ್ಕು ತಿಂಗಳಿನಿಂದ ಆದಾಯವಿಲ್ಲದೇ ಸಂಕಷ್ಟದ ಸ್ಥಿತಿಗೆ ತಲುಪಿದ್ದಾರೆ. ಅವರ ಸ್ಥಿತಿಯನ್ನು ಸರ್ಕಾರ ಅರ್ಥ ಮಾಡಿಕೊಂಡು ವೇತನ ಪಾವತಿ ಮಾಡಬೇಕು’ ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ ಮಾತನಾಡಿ, ‘ಕೊರೊನಾದಿಂದಾಗಿ ಅಕ್ಷರ ದಾಸೋಹ ನೌಕರರಿಗೆ ಕೆಲಸ ಹಾಗೂ ವೇತನ ಇಲ್ಲದಂತಾಗಿದೆ. ಲಾಕ್ಡೌನ್ ಹಾಗೂ ಬೇಸಿಗೆ ರಜೆಯ ಪರಿಹಾರವನ್ನು ನೀಡುವಂತೆ ವಿನಂತಿಸಿದರೂ, ಲಕ್ಷಾಂತರ ಕಾರ್ಮಿಕರಿಗೆ ಪರಿಹಾರ ನೀಡಿಲ್ಲ. ಈ ಬಗ್ಗೆ ಸರ್ಕಾರ ಗಮನಹರಿಸಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ವೇತನ ಪಾವತಿಸುವ ತನಕ ರಾಜ್ಯದ ಎಲ್ಲ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಎದುರು ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ಸಂಘಟನೆ ತೀರ್ಮಾನಿಸಿದೆ ಎಂದರು.

ಸಂಘದ ಮುಖಂಡರಾದ ರೇಖಾಲತಾ, ಶಮೀನಾ ಬಾನು, ರತ್ನಮಾಲಾ, ರೆಮಿಝಾ, ಉಮಾವತಿ, ಅಂಜಲಿ, ಭವಾನಿ, ಪಾರ್ವತಿ, ಅನುರಾಧಾ ಅರುಣಾ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.