ಪುತ್ತೂರು: ಹುಲಿವೇಷದಲ್ಲಿ ಹೆಸರು ಗಳಿಸಿರುವ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಅವರನ್ನು ಹುದ್ದೆಯಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ತಿಳಿಸಿದ್ದಾರೆ.
ಪುತ್ತೂರು ತಾಲ್ಲೂಕಿನ ಕಬಕ ಗ್ರಾಮದ ಶೇವಿರೆ ನಿವಾಸಿ, ಕಲ್ಲೇಗ ಕಲ್ಕುಡ-ಕಲ್ಲುರ್ಟಿ ದೈವಸ್ಥಾನದ ಪರಿಚಾರಕ ಚಂದ್ರಶೇಖರ ಗೌಡ ಮತ್ತು ಕಬಕ ಹಾಲು ಉತ್ಪಾದಕ ಸೊಸೈಟಿ ಕಾರ್ಯದರ್ಶಿ ಕಮಲ ದಂಪತಿಯ ಪುತ್ರ ಅಕ್ಷಯ್ (26) ಅವರನ್ನು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ನೆಹರೂ ನಗರದಲ್ಲಿ ಸೋಮವಾರ ತಡರಾತ್ರಿ ಹತ್ಯೆ ಮಾಡಲಾಗಿತ್ತು.
ಪ್ರಮುಖ ಆರೋಪಿಗಳಾದ ಮನೀಶ್ ಮತ್ತು ಚೇತನ್ ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರಿಗೆ ಶರಣಾಗಿದ್ದರು. ಕೇಶವ ಪಡೀಲು ಮತ್ತು ಮಂಜು ಯಾನೆ ಮಂಜುನಾಥನನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದರು. ನಾಲ್ವರೂ ಆರೋಪಿಗಳಿಗೆ ಬುಧವಾರ ನ್ಯಾಯಾಂಗ ಬಂಧನ ವಿಧಿಸಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.