ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನಕ್ಕೆ ಕಾರ್ಮಿಕರಿಗೆ ರಜೆ ನೀಡದಿದ್ದರೆ ಕ್ರಮ: ಡಿ.ಸಿ

Published 25 ಏಪ್ರಿಲ್ 2024, 15:21 IST
Last Updated 25 ಏಪ್ರಿಲ್ 2024, 15:21 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಎಲ್ಲ ಕಾರ್ಮಿಕರಿಗೆ ಶುಕ್ರವಾರ ವೇತನಸಹಿತ ರಜೆ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚಿಸಿದ್ದಾರೆ. 

‘ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕು. ಮತ ಚಲಾಯಿಸಲು ರಜೆ ನೀಡದಿದ್ದರೆ ಹಾಗೂ ಮತದಾನ ಮಾಡಲು ಅವಕಾಶ ಕಲ್ಪಿಸದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾಪ್ರಾತಿನಿಧ್ಯ ಕಾಯ್ದೆಯ ಕಲಂ 135(ಬಿ)  ಅಡಿ ಕ್ರಮ ಜರುಗಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT