ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಟೆಲ್‌ಗಳಲ್ಲಿ ಹಳೆ ವಿದ್ಯಾರ್ಥಿ ಸಂಘ: ಡಾ. ಆನಂದ್

Published 10 ಫೆಬ್ರುವರಿ 2024, 5:59 IST
Last Updated 10 ಫೆಬ್ರುವರಿ 2024, 5:59 IST
ಅಕ್ಷರ ಗಾತ್ರ

ಮಂಗಳೂರು: ಹಾಸ್ಟೆಲ್‍ನಲ್ಲಿ ಉಳಿದು ಶಿಕ್ಷಣ ಪೂರೈಸಿರುವ ವಿದ್ಯಾರ್ಥಿಗಳನ್ನು ಒಂದು ಗೂಡಿಸುವ ಸಲುವಾಗಿ ಹಾಸ್ಟೆಲ್ ಗಳಲ್ಲಿ ಹಳೆ ವಿದ್ಯಾರ್ಥಿ ಸಂಘಗಳನ್ನು ಸ್ಥಾಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ವಹಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಮತ್ತು ಆಶ್ರಮ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೇಲ್ವಿಚಾರಕರು, ಅಡುಗೆಯವರು, ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರಿಗೆ ಶುಕ್ರವಾರ ಇಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಲು, ಮೂಲ ಸೌಕರ್ಯ ಕೊರತೆಯಾದಲ್ಲಿ ಅಥವಾ ಯಾವುದೇ ಸಮಸ್ಯೆ ಆದಲ್ಲಿ ಸರಿಪಡಿಸಲು ತಾಲ್ಲೂಕು ಮಟ್ಟದಲ್ಲಿ ಹಾಸ್ಟೆಲ್‍ಗಳಿಗೆ ನೋಡಲ್ ಅಧಿಕಾರಿ ನೇಮಿಸಲಾಗಿದೆ. ಅವರು ವಿದ್ಯಾರ್ಥಿಗಳೊಂದಿಗೆ ಸಮಯವನ್ನು ಕಳೆಯಬೇಕು ಮತ್ತು ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಬೇಕು. ಹಾಸ್ಟೆಲ್‍ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಸಂತೋಷಕುಮಾರ್ ಮಾತನಾಡಿ, ‘ಹಾಸ್ಟೆಲ್ ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಮೂಡಿಸಲು ಸಿಬ್ಬಂದಿಗೆ ಸಾಧ್ಯ. ವಿದ್ಯಾರ್ಥಿಗಳಿಗೆ ಉತ್ತಮ ವಿಷಯದ ಬಗ್ಗೆ ತಿಳಿಸಿ, ಅವರ ತಪ್ಪುಗಳನ್ನು ತಿದ್ದಿದಲ್ಲಿ, ಉತ್ತಮ ವ್ಯಕ್ತಿಯಾಗಿ ರೂಪಿಸಲು ಸಾಧ್ಯ. ಹಾಸ್ಟೆಲ್ ಸಿಬ್ಬಂದಿ ಇದನ್ನು ನಿರ್ವಹಿಸಬೇಕು’ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ರಶ್ಮಿ, ಜಿಲ್ಲಾ ಪಂಚಾಯಿತಿ ಲೆಕ್ಕಾಧಿಕಾರಿ ಶಕುಂತಲಾ ಶೆಣೈ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT