ಮೂಡುಬಿದಿರೆ (ದಕ್ಷಿಣ ಕನ್ನಡ): 2026ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜು ಅತ್ಯುತ್ತಮ ಸಾಧನೆ ಮಾಡಿದ್ದು, ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ 600ರಲ್ಲಿ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಮಂಜುನಾಥ್ ಎಸ್. 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ವರ್ಷದ ಫಲಿತಾಂಶದಲ್ಲಿ 95 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 ರ್ಯಾಂಕ್ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 687 ಮಂದಿ ಶೇ 95ಕ್ಕಿಂತ ಹೆಚ್ಚು ಅಂಕ ಗಳಿಸಿದ್ದು, 1,557 ವಿದ್ಯಾರ್ಥಿಗಳು ಶೇ 90ಕ್ಕಿಂತ ಅಧಿಕ, 1,892 ಮಂದಿ ಶೇ 85ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. 285 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

‘ದ್ವಿತೀಯ ಪಿ.ಯು ಅಂತಿಮ ಪರೀಕ್ಷೆ ನಡೆಯುತ್ತಿದ್ದ ಸಂದರ್ಭ ದಿಶಾಳ ತಾಯಿ ಸವಿತಾ ಮೃತಪಟ್ಟಿದ್ದರು. ತಾಯಿಯನ್ನು ಕಳೆದುಕೊಂಡ ದುಃಖದಲ್ಲೂ ದಿಶಾ ಪರೀಕ್ಷೆ ಬರೆದು ಅತ್ಯುನ್ನತ ಸಾಧನೆ ತೋರಿದ್ದಾಳೆ’ ಎಂದು ಶ್ಲಾಘಿಸಿದರು.

ದಿಶಾಳನ್ನು ಅಭಿನಂದಿಸಿದ ಮೋಹನ ಆಳ್ವ, ಆಕೆಗೆ ₹3 ಲಕ್ಷ ನಗದು ಪುರಸ್ಕಾರ ಪ್ರಕಟಿಸಿದ್ದು, ಸಂಸ್ಥೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಯೋಜನೆಯಡಿ ಸಿ.ಎ ವ್ಯಾಸಂಗ ಮಾಡಲು ನೆರವು ನೀಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.