ಗುರುವಾರ , ಸೆಪ್ಟೆಂಬರ್ 29, 2022
26 °C

ಆಳ್ವಾಸ್ ನುಡಿಸಿರಿ ದಿನಾಂಕ ಬದಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೂಡುಬಿದಿರೆ (ದಕ್ಷಿಣ ಕನ್ನಡ): ಇಲ್ಲಿಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ 'ಆಳ್ವಾಸ್ ನುಡಿಸಿರಿ'ಯನ್ನು ಡಿಸೆಂಬರ್ 16, 17 ಮತ್ತು 18ರ ಬದಲು ಡಿಸೆಂಬರ್ 21, 22 ಮತ್ತು 23 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.

‘ನುಡಿಸಿರಿಯ ದಿನಾಂಕ ಮೊದಲೇ ನಿಗದಿಯಾಗಿತ್ತು. ಇದೇ ಸಂದರ್ಭದಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನೂ ಆಯೋಜಿಸುವ ಅವಕಾಶ ನಮಗೆ ಒದಗಿ ಬಂದಿದೆ. ಈ ಎರಡೂ ಕಾರ್ಯಕ್ರಮಗಳು ಪರಸ್ಪರ ಪೂರಕವಾಗಿ ಏಕಕಾಲದಲ್ಲಿ ನಡೆದರೆ ಅದರಿಂದ ಹೆಚ್ಚಿನ ಪ್ರಯೋಜನ ದೊರೆಯಲಿದೆ ಎಂಬ ಕಾರಣಕ್ಕೆ ಕಾರ್ಯಕಾರಿ ಸಮಿತಿಯ ತೀರ್ಮಾಣದಂತೆ ಆಳ್ವಾಸ್ ನುಡಿಸಿರಿ ಸಮ್ಮೇಳನದ ದಿನಾಂಕ ಬದಲಾವಣೆ ಮಾಡಲಾಗಿದೆ‘ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು