ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು | ಆಳ್ವಾಸ್: ವಿದ್ಯಾರ್ಥಿ ವೇತನಕ್ಕೆ ಪ್ರವೇಶ ಪರೀಕ್ಷೆ

₹10 ಕೋಟಿಗೂ ಅಧಿಕ ಮೊತ್ತದ ವಿದ್ಯಾರ್ಥಿ ವೇತನ ಘೋಷಣೆ
Published 16 ಮಾರ್ಚ್ 2024, 0:13 IST
Last Updated 16 ಮಾರ್ಚ್ 2024, 0:13 IST
ಅಕ್ಷರ ಗಾತ್ರ

ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ ಒಟ್ಟಾರೆ ₹10 ಕೋಟಿಗೂ ಅಧಿಕ ಮೊತ್ತದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು.

ಪ್ರಜಾವಾಣಿ ವಾರ್ತೆ

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಆಳ್ವಾಸ್ ಪ್ರತಿಷ್ಠಾನವು ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ, ದತ್ತು ಸ್ವೀಕಾರ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ ನೀಡುತ್ತ ಬಂದಿದೆ. ವರ್ಷಕ್ಕೆ ಸರಾಸರಿ 3,000 ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯುತ್ತಾರೆ. ಈ ಬಾರಿ ಘೋಷಿಸಿರುವ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು 10ನೇ ತರಗತಿ ಸಿಬಿಎಸ್‌ಇ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ), ಐಸಿಎಸ್‌ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮದ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಬರೆಯಬಹುದು ಎಂದರು.

ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತ 100 ನಿಮಿಷಗಳ ಪರೀಕ್ಷೆಯು ಮಾರ್ಚ್ 31ರಂದು ಸಿಬಿಎಸ್‌ಇ ಮತ್ತು ಐಸಿಎಸ್‌ಇ ಹಾಗೂ ಏಪ್ರಿಲ್ 14ರಂದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಮೂಡುಬಿದಿರೆಯ ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನಲ್ಲಿ ನಡೆಯಲಿದೆ. ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಶ್ನೆಪತ್ರಿಕೆ ಇರಲಿದೆ. ಎಸ್ಸೆಸ್ಸೆಲ್ಸಿ ಅಂಕ ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುತ್ತದೆ. ಸಿಬಿಎಸ್‌ಇ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 28 ಮತ್ತು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಏಪ್ರಿಲ್ 10 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು https://scholarship.Alvas.org/ PUC/login.php ಈ ವೆಬ್‌ಸೈಟ್ ಮೂಲಕವೂ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.

ಆಳ್ವಾಸ್‌ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಇದ್ದರು.

ಮಾಹಿತಿಗೆ ಮೊ.8884477588, 6366377827, 6366377823 ಇದಕ್ಕೆ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT