ಮೂಡುಬಿದಿರೆ (ದಕ್ಷಿಣ ಕನ್ನಡ): ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ ಈ ಬಾರಿ ಡಿ.10 ರಿಂದ 15ರವರೆಗೆ ವಿದ್ಯಾಗಿರಿಯಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ವರ್ಷದ ಆಳ್ವಾಸ್ ವಿರಾಸತ್ 30ನೇ ವರ್ಷದ ಕಾರ್ಯಕ್ರಮ. ಈ ಕಾರಣದಿಂದ ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. 6 ದಿನಗಳ ಕಾರ್ಯಕ್ರಮಗಳಲ್ಲಿ ಮೊದಲ 5 ದಿನ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳ ಪ್ರದರ್ಶನ ಇರಲಿದೆ. ಡಿ.15ರಂದು ವಸ್ತು ಪ್ರದರ್ಶನ ಮಾತ್ರ ನಡೆಯಲಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.