ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಬಡಬೆಟ್ಟು ಸೇತುವೆ ಶಿಥಿಲ: ಭಾರಿ ವಾಹನ ಸಂಚಾರ ನಿಷೇಧ

Published 1 ಜುಲೈ 2024, 14:18 IST
Last Updated 1 ಜುಲೈ 2024, 14:18 IST
ಅಕ್ಷರ ಗಾತ್ರ

ಬೆಳ್ತಂಗಡಿ: ತಾಲ್ಲೂಕಿನ ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಿಂದ 1 ಕಿ.ಮೀ. ದೂರದಲ್ಲಿರುವ ಅಂಬಡಬೆಟ್ಟು ಸೇತುವೆ  ಶಿಥಿಲಗೊಂಡಿದೆ.

ಈ ಸೇತುವೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದ್ದು, ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ, ಸಂಚಾರ ಮಾರ್ಗ ಬದಲಾಯಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಉಜಿರೆ - ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯನ್ನು ಬಳಸಿ ಸಂಚರಿಸಬಹುದು. ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ದ್ವಾರದಿಂದ, ಸುರ್ಯ ದೇವಸ್ಥಾನ ಮಾರ್ಗವಾಗಿ, ಕೇಳ್ತಾಜೆ ಮೂಲಕ ಸಂಚರಿಸಬೇಕು. ಬೆಳ್ತಂಗಡಿ- ಕಿಲ್ಲೂರು-ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ.ಕಾಲೊನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ, ರಾಜ್ಯ ಹೆದ್ದಾರಿ-276ರ ಧರ್ಮಸ್ಥಳ, ಮುಂಡಾಜೆ, ದಿಡುಪೆ ರಸ್ತೆಯನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT