ಮಂಗಳೂರು: ಪಣಂಬೂರು ಕಡಲ ಕಿನಾರೆ ಬಳಿ ತಿಮಿಂಗಿಲ ವಾಂತಿ (ಅಂಬರ್ ಗ್ರೀಸ್) ಮಾರಾಟಕ್ಕೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಗಳಿಂದ 900 ಗ್ರಾಂಗಳಷ್ಟು ತಿಮಿಂಗಿಲ ವಾಂತಿಯನ್ನು ವಶಪಡಿಸಿಕೊಂಡಿದ್ದಾರೆ.
‘ಆರೋಪಿಗಳನ್ನು ಉಡುಪಿ ಜಿಲ್ಲೆಯ ಸಾಲಿಗ್ರಾಮದ ಜಯಕರ (39 ವರ್ಷ), ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆದಿತ್ಯ (25), ಹಾವೇರಿ ಜಿಲ್ಲೆಯ ಶಿಗ್ಗಾವಿಯ ಲೋಹಿತ್ ಕುಮಾರ್ ಗುರಪ್ಪನವರ್ (39) ಎಂದು ಗುರುತಿಸಲಾಗಿದೆ’ ಎಂಬುದಾಗಿ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದರು.
‘ಆರೋಪಿಗಳು ತಿಮಿಂಗಿಲ ವಾಂತಿಯ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ವಿಶ್ವಸನೀಯ ಮೂಲಗಳಿಂದ ಮಾಹಿತಿ ಬಂದಿತ್ತು. ಸ್ಥಳಕ್ಕೆ ಧಾವಿಸಿದಾಗ ಆರೋಪಿಗಳ ಬಳಿ 900 ಗ್ರಾಂ ತಿಮಿಂಗಿಲ ವಾಂತಿ ಪತ್ತೆಯಾಗಿದೆ. ಮಾರುಕಟ್ಟೆಯಲ್ಲಿ ಅದಕ್ಕೆ ₹ 90 ಲಕ್ಷ ಮಭಲ್ಯ ಇದೆ ಎಂದು ಅಂದಾಜಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.