ಗುರುವಾರ , ಜುಲೈ 29, 2021
23 °C

ಯೋಧರ ಮಕ್ಕಳಿಗೆ ಉಚಿತ ಶಿಕ್ಷಣ: ಅಂಬಿಕಾ ಶಿಕ್ಷಣ ಸಂಸ್ಥೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: ಇತ್ತೀಚೆಗೆ ಪುಲ್ವಾಮಾದಲ್ಲಿ ಮೂವರು ಉಗ್ರರನ್ನು ಹತ್ಯೆಗೈದು, ಪ್ರಾಣಾರ್ಪಣೆ ಮಾಡಿದ ವಿಜಯಪುರದ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದ ವೀರಯೋಧ ಕಾಶೀರಾಯ ಬೊಮ್ಮನಹಳ್ಳಿ ಅವರ ಮಕ್ಕಳಿಗೆ ಪದವಿ ಹಂತದವರೆಗೆ ಉಚಿತ ವಸತಿ ಹಾಗೂ ಶಿಕ್ಷಣ ನೀಡುವ ಬಗ್ಗೆ ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ನಿರ್ಣಯ ಕೈಗೊಂಡಿದೆ.

 ಇತ್ತೀಚೆಗೆ ವಿಜಯಪುರದ ಕಾಶಿರಾಯ ಬೊಮ್ಮನಹಳ್ಳಿ ನಿವಾಸಕ್ಕೆ ಭೇಟಿ ನೀಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಮಾತೃಸಂಸ್ಥೆಯಾದ ನಟ್ಟೋಜ ಫೌಂಡೇಷನ್ ಟ್ರಸ್ಟ್ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಮೃತ ಯೋಧನ ಪತ್ನಿ ಸಂಗೀತಾ ಕಾಶೀರಾಯ ಬೊಮ್ಮನಹಳ್ಳಿ ಅವರೊಂದಿಗೆ ಮಾತುಕತೆ ನಡೆಸಿ ಉಚಿತ ಶಿಕ್ಷಣದ ಕೊಡುಗೆಯ  ಅಧಿಕೃತ ಪತ್ರವನ್ನು ಹಸ್ತಾಂತರಿಸಿದರು. ಕಾಶಿರಾಯ ಅವರ ಪುತ್ರಿ ಪೃಥ್ವಿ ಪ್ರಸ್ತುತ ಎರಡನೇ ತರಗತಿ ಓದುತ್ತಿದ್ದು, ಪುತ್ರ ಭಗತ್ ಸಿಂಗ್ ಚಿಕ್ಕವನಾಗಿದ್ದಾನೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು