ಉಳ್ಳಾಲ: ರಂಗ ಮಂದಿರವನ್ನು ಕೊಡುಗೆಯಾಗಿ ನೀಡಿರುವುದು ಅಂಬ್ಲಮೊಗರಿನ ಊರವರಿಗೆ ಶಾಲಾ ಮಕ್ಕಳಿಗೆ ಬಹುದೊಡ್ಡ ಸ್ವತ್ತಾಗಿದೆ. ವಿದ್ಯಾ ಕೇಂದ್ರಗಳಲ್ಲಿ ಅಭಿವೃದ್ಧಿ ಕೆಲಸಗಳಾದಲ್ಲಿ ಮಾತ್ರ ಗ್ರಾಮ ಅಭಿವೃದ್ಧಿಯಾಗುತ್ತದೆ ಎಂದು ಮುಖಂಡ ಸುದರ್ಶನ್ ಶೆಟ್ಟಿ ಹೇಳಿದರು.

ಅಂಬ್ಲಮೊಗರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸ್ಥಳದಾನಿ ಪಡ್ಯಾರಮನೆ ರಾಮಕ್ಕ ಪಕೀರ ಶೆಟ್ಟಿ ಸ್ಮರಣಾರ್ಥ ಅವರ ಮಕ್ಕಳಾದ ಪಡ್ಯಾರಮನೆ ಆನಂದ ಶೆಟ್ಟಿ ಮುಂಬೈ, ಸದಾಶಿವ ಶೆಟ್ಟಿ ಕಡೆಂಜ ಹಾಗೂ ವಿಠಲ ಶೆಟ್ಟಿ ಬೆಂಗಳೂರು ಅವರು ಕೊಡುಗೆಯಾಗಿ ನಿರ್ಮಿಸಿದ ಶಾಲಾ ರಂಗಮಂದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಉಳ್ಳಾಲ ತಾಲ್ಲೂಕು ಅಧ್ಯಕ್ಷ ಮಹಮ್ಮದ್ ರಫೀಕ್ ಅಂಬ್ಲಮೊಗರು ಮಾತನಾಡಿ, ಶಿಕ್ಷಣದ ಅಭಿವೃದ್ಧಿಗೆ ದಾನಿಗಳ ಕೊಡುಗೆ ಅಮೂಲ್ಯವಾಗಿದ್ದು, ಗ್ರಾಮೀಣ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಮಾಜದ ಸಹಕಾರ ಅಗತ್ಯ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಮಾತನಾಡಿದರು.

ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ನಿವೃತ್ತರಾದ ಜೋಸ್ಟಿನ್ ಡಿಸೋಜ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. ದಾನಿಗಳಾದ ಸದಾಶಿವ ಶೆಟ್ಟಿ ಹಾಗೂ ವಿಠಲ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಮಂಗಳೂರು ದಕ್ಷಿಣ ವಲಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಧಾಕೃಷ್ಣ ರಾವ್, ಕಾರ್ಯದರ್ಶಿ ಮೋಹನ್ ಶಿರ್ಲಾಲ್, ಕಟ್ಟಡದ ಗುತ್ತಿಗೆದಾರ ಅಶ್ರಫ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ತ್ಯಾಗಂ ಹರೇಕಳ ಅವರನ್ನು ಅಭಿನಂದಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬುಸಾಲಿ, ಪ್ರಮುಖರಾದ ಸಂಜೀವ ಶೆಟ್ಟಿ, ವಿಠಲ್ ಶೆಟ್ಟಿ ಬಸ್ತಿಕಟ್ಟೆ, ಜಯಶೀಲ ಶೆಟ್ಟಿ, ಮೀಂಜ ಮಂಗಲ್ಪಾಡಿ ಕೊ–ಆಪರೇಟಿವ್ ಸೊಸೈಟಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಸುಬೋದ್ ಶೆಟ್ಟಿ, ಹೆಲೆನ್ ಡಿಸೋಜ, ಮುಮ್ತಾಝ್, ಇಂದಿರಾ, ಗೀತಾ ನಾಯಕ್, ಜಾರ್ಜ್ ಡಿಸೋಜ, ಶಿಕ್ಷಕಿ ಗೀತಾ ಕೆ. ಭಾಗವಹಿಸಿದ್ದರು.

ಶಾಲಾ ಮುಖ್ಯಶಿಕ್ಷಕ ಜಗದೀಶ್ ಶೆಟ್ಟಿ ಎಲಿಯಾನ ಸ್ವಾಗತಿಸಿದರು. ಶಿಕ್ಷಕಿ ನಳಿನಾಕ್ಷಿ ನಿರೂಪಿಸಿದರು. ಸಹಶಿಕ್ಷಕಿ ಶ್ವೇತಾ ಎಂ.ಪೈ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-572906360

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.