ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11ರಂದು ಪುತ್ತೂರಿಗೆ ಅಮಿತ್‌ ಶಾ

Last Updated 2 ಫೆಬ್ರುವರಿ 2023, 18:33 IST
ಅಕ್ಷರ ಗಾತ್ರ

ಮಂಗಳೂರು: ಕ್ಯಾಂಪ್ಕೊ ಸಂಸ್ಥೆಯ ಸುವರ್ಣಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಅವರು ಫೆ.11ರಂದು ಪುತ್ತೂರಿಗೆ ಭೇಟಿ ನೀಡಲಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ, ಶಾ ಅವರು ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುವರು. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಪುತ್ತೂರು ಸಮೀಪದ ಈಶ್ವರಮಂಗಲಕ್ಕೆ ಬರುವರು. ಮಧ್ಯಾಹ್ನ 1.30ರಿಂದ 2.30ರವರೆಗೆ ಈಶ್ವರಮಂಗಲದ ಭಾರತ್‍ ಮಾತಾ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಪಂಚಮುಖಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, 2.35ಕ್ಕೆ ಹೆಲಿಕಾಪ್ಟರ್‌ ಮೂಲಕವೇ ಪುತ್ತೂರಿನ ಸೇಂಟ್‌ ಫಿಲೋಮಿನಾ ಕಾಲೇಜಿಗೆ ಬರುವರು.

ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಮೈದಾನದಲ್ಲಿ ಸಂಜೆ 3.30ರಿಂದ ಸಮಾವೇಶ ನಡೆಯಲಿದ್ದು, ಅಲ್ಲಿ ಕ್ಯಾಂಪ್ಕೊ ಸುವರ್ಣ ಮಹೋತ್ಸವಕ್ಕೆ ಚಾಲನೆ, ವಿವಿಧ ಉತ್ಪನ್ನಗಳ ಉದ್ಘಾಟನೆ, ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಚಾಕೊಲೇಟ್ ಫ್ಯಾಕ್ಟರಿಗೆ ಭೇಟಿ ನೀಡುವರು. 5.30ಕ್ಕೆ ಹೆಲಿಕಾಪ್ಟರ್ ಮೂಲಕ ಕಣ್ಣೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT