ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಂಆರ್‌ ಜಲಾಶಯದ ನೀರು ಕೃಷಿ, ಕೈಗಾರಿಕೆಗೆ ಬಳಕೆಗೆ ನಿಷೇಧ

Published 18 ಏಪ್ರಿಲ್ 2024, 5:14 IST
Last Updated 18 ಏಪ್ರಿಲ್ 2024, 5:14 IST
ಅಕ್ಷರ ಗಾತ್ರ

ಮಂಗಳೂರು: ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶಕ್ಕಾಗಿ ಬಿಳಿಯೂರು ಜಲಾಶಯದಿಂದ ಎಎಂಆರ್‌ ಜಲಾಶಯಕ್ಕೆ ನೀರು ಹರಿಸಲಾಗುತ್ತಿದೆ. ಕೃಷಿ ಮತ್ತು ಕೈಗಾರಿಕೆಗಳಿಗೆ ಎಎಂಆರ್‌ ಜಲಾಶಯದ ನೀರು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ ನೀರು ಪೂರೈಸಲು ಎಎಂಆರ್‌ ಜಲಾಶಯದಲ್ಲಿ ನೀರು ಲಭ್ಯವಾಗುವಂತೆ ನೋಡಿಕೊಳ್ಳಬೇಕಿದೆ. ಅದಕ್ಕಾಗಿ ಉಪ್ಪಿನಂಗಡಿ ಬಳಿಯ ಬಿಳಿಯೂರು ಜಲಾಶಯದಿಂದ ಎಎಂಆರ್‌ ಜಲಾಶಯಕ್ಕೆ ಗುರುವಾರ ಬೆಳಿಗ್ಗೆಯಿಂದ ನೀರು ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. 

ಜಿಲ್ಲೆಯ ನಾಗರಿಕರು ನೀರನ್ನು ಮಿತವಾಗಿ ಬಳಸಬೇಕು. ಮಳೆ ಸುರಿಯುವವರೆಗೂ ಕೃಷಿ ಮತ್ತು ಕೈಗಾರಿಕೆಯವರು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT