'ಅಮೃತ ಭಾರತಿಗೆ ಕನ್ನಡದಾರತಿ' ಮೆರವಣಿಗೆಗೆ ಚಾಲನೆ

ಮಂಗಳೂರು: ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದ ಮೆರವಣಿಗೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಚಾಲನೆ ನೀಡಲಾಯಿತು.
ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ತುಳು ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್ ಸಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯು ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರಾರಂಭಗೊಂಡಿದ್ದು, ಪುರಭವನದಲ್ಲಿ ಮುಕ್ತಾಯವಾಗಲಿದೆ.
ಸಾಂಸ್ಕೃತಿಕ ಕಲಾತಂಡಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಮೆರಣಿಗೆಯಲ್ಲಿ ಭಾಗವಹಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.