ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಮೃತ ಪುಸ್ತಕ’ ಅಭಿಯಾನ

Last Updated 13 ಆಗಸ್ಟ್ 2022, 3:01 IST
ಅಕ್ಷರ ಗಾತ್ರ

ಮುಡಿಪು: ‘ಓದುವವರ ಸಂಖ್ಯೆ ಹೆಚ್ಚಾದರೆ ಪುಸ್ತಕ ಬರೆಯುವವರ ಸಂಖ್ಯೆಯೂ ಹೆಚ್ಚಾಗುತ್ತದೆ. ಓದುವ ಸಂಸ್ಕೃತಿ, ಹವ್ಯಾಸಗಳನ್ನು ಮೈಗೂಡಿಸಿಕೊಂಡಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ’ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಹೇಳಿದರು.

ಅಮೃತ ಭಾರತಿಗೆ ಕನ್ನಡ ಆರತಿ ಕಾರ್ಯಕ್ರಮದ ಅಂಗವಾಗಿ ‘ಅಮೃತ ಪುಸ್ತಕ ಮಾರಾಟ ಅಭಿಯಾನ’ ಹಾಗೂ ಸಾಕ್ಷಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಂಗಳೂರು ವಿವಿ ಕುಲಸಚಿವ ಡಾ.ಕಿಶೋರ್ ಕುಮಾರ್ ಸಿ.ಕೆ ಮಾತನಾಡಿ, ‘ಯುವ ಸಮುದಾಯ ಪುಸ್ತಕ ಓದುವ ಸಂಸ್ಕೃತಿಯ‌ನ್ನು ಬೆಳೆಸಿಕೊಂಡು ಮುನ್ನಡೆದರೆ ಉತ್ತಮ ಸಮಾಜದ ನಿರ್ಮಾಣ ಸಾಧ್ಯ’ ಎಂದರು.

ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಸೋಮಣ್ಣ ಹೊಂಗಳ್ಳಿ, ಮಂಗಳೂರು ವಿವಿ ಗ್ರಂಥಾಲಯದ ಮುಖ್ಯಸ್ಥ ಪುರುಷೋತ್ತಮ, ಪ್ರಾಧ್ಯಾಪಕ ಡಾ. ಮಾಧವ ಎಂ.ಕೆ, ನಿರ್ಮಲ, ಇಂದಿರಾ, ರಾಮಾಂಜಿ ಹಾಗೂ ಅಕಾಡೆಮಿಯ ಹರೀಶ್ ಇದ್ದರು. ಡಾ.ಧನಂಜಯ ಕುಂಬ್ಳೆ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT