ಬೆಳ್ತಂಗಡಿ: ಸ್ವಚ್ಛತೆ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪ್ರಗತಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಸಾಧನೆಯನ್ನು ಪರಿಗಣಿಸಿ ಅಂಡಿಂಜೆ ಗ್ರಾಮ ಪಂಚಾಯಿತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಗ್ರಾಮ ಪಂಚಾಯಿತಿ ತೆರಿಗೆ ವಸೂಲಾತಿಯಲ್ಲಿ ಶೇ 99 ಅಂಕ ಗಳಿಸಿದೆ. ಸ್ವಂತ ಸಂಪನ್ಮೂಲ ಕ್ರಿಯಾ ಯೋಜನೆಯ ಅನುದಾನದಲ್ಲಿ ರಸ್ತೆ ದುರಸ್ತಿ, ಪೈಪ್‌ಲೈನ್ ಅಳವಡಿಕೆ, ಕೊಳವೆ ಬಾವಿ ರಚನೆ, ರುದ್ರಭೂಮಿಗೆ ಶೌಚಾಲಯ ಹಾಗೂ ಸ್ನಾನಗೃಹ ನಿರ್ಮಾಣ ಮಾಡಲಾಗಿದೆ.

ಪರಿಶಿಷ್ಟ ಜಾತಿ, ಪಂಗಡದ ಕುಟುಂಬಗಳ ಶ್ರೇಯೋಭಿವೃದ್ಧಿಗೆ ವೈದ್ಯಕೀಯ ವೆಚ್ಚ, ವಿವಾಹದ ಬಾಬ್ತು, ಕಂಪ್ಯೂಟರ್ ತರಬೇತಿ, ಪ್ಯಾರಾ ಮೆಡಿಕಲ್ ತರಬೇತಿ ನೀಡಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಬೇಡಿಕೆ ಸಲ್ಲಿಸಿದ ಕುಟುಂಬಗಳಿಗೆ ಉದ್ಯೋಗ ಚೀಟಿ ನೀಡಿ, ಬೇಡಿಕೆ ಸಲ್ಲಿಸಿದ 15 ದಿನಗಳೊಳಗೆ ಉದ್ಯೋಗ ನೀಡುವಲ್ಲಿ ಸಾಧನೆ ಮಾಡಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಒಟ್ಟು 738 ಪುರುಷರು ಮತ್ತು 664 ಮಹಿಳೆಯರು ಭಾಗಿಯಾಗಿದ್ದಾರೆ.

ಆಡಳಿತ ಮಂಡಳಿಯ ಪ್ರೇರೇಪಣೆ, ಸಾರ್ವಜನಿಕರ ಸಹಕಾರ ಹಾಗೂ ಸಿಬ್ಬಂದಿ ಕರ್ತವ್ಯ ಪ್ರಜ್ಞೆಯಿಂದ ಗಾಂಧಿ ಪುರಸ್ಕಾರ ಪಡೆಯಲು ಸಾಧ್ಯವಾಯಿತು ಎಂದು ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ ಪ್ರತಿಕ್ರಿಯಿಸಿದ್ದಾರೆ.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಯುವಕ ಮಂಡಲದ ಸಹಭಾಗಿತ್ವದಲ್ಲಿ ಸಮುದಾಯ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಒಟ್ಟು 4773 ಜನಸಂಖ್ಯೆ ಇರುವ ಅಂಡಿಂಜೆ ಗ್ರಾಮ ಪಂಚಾಯಿತಿ ಬಯಲು ಬಹಿರ್ದೆಸೆ ಮುಕ್ತ ಗ್ರಾಮವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.