ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸನಾತನ ಯಕ್ಷಾಲಯದ ವಾರ್ಷಿಕೋತ್ಸವ 16ಕ್ಕೆ

Published 13 ಜೂನ್ 2024, 14:32 IST
Last Updated 13 ಜೂನ್ 2024, 14:32 IST
ಅಕ್ಷರ ಗಾತ್ರ

ಮಂಗಳೂರು: ಸನಾತನ ಯಕ್ಷಾಲಯದ 15ನೇ ವಾರ್ಷಿಕೋತ್ಸವದ ಅಂಗವಾಗಿ ಜೂ.16ರಂದು ನಗರದ ಪುರಭವನದಲ್ಲಿ ‘ದೇವಿ ಮಹಾತ್ಮೆ’ ಜೋಡಾಟವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸದಸ್ಯ ಸುನಿಲ್ ಮುಂಡ್ಕೂರು ಹೇಳಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 2ರಿಂದ ರಾತ್ರಿ 9 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದೆ. ಸಂಜೆ 4 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ವಹಿಸುವರು. ಸ್ಪೀಕರ್ ಯು.ಟಿ. ಖಾದರ್ ಭಾಗವಹಿಸುವರು ಎಂದರು.

ಸನಾತನ ಯಕ್ಷಾಲಯವು ರಾಕೇಶ್ ರೈ ನೇತೃತ್ವದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ 16 ಕಡೆಗಳಲ್ಲಿ ತರಬೇತಿ ನಡೆಸುತ್ತಿದೆ. 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಾಟ್ಯ, ಬಣ್ಣಗಾರಿಕೆ, ಪ್ರಸಾದನ ಕಲೆಗಳ ತರಬೇತಿ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಸನಾತನ ಯಕ್ಷಾಲಯದ ಪ್ರಮುಖರಾದ ರಾಕೇಶ್ ರೈ, ಲೀಲಾಧರ ಶೆಟ್ಟಿ, ಸುಕನ್ಯಾ, ಸ್ನೇಹ ಆಚಾರ್ಯ, ಧೀರಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT