ಗುರುವಾರ , ಫೆಬ್ರವರಿ 27, 2020
19 °C

ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿ ಆರೋಪ: ಪ್ರತಿಭಟನಕಾರರ ವಿರುದ್ಧ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ದಾಖಲೆ (ಎನ್‌ಪಿಆರ್‌) ವಿರುದ್ಧ ಅಡ್ಯಾರ್‌– ಕಣ್ಣೂರಿನಲ್ಲಿ ಬುಧವಾರ ನಡೆದ ಪ್ರತಿಭಟನೆ ವೇಳೆ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್‌) ತಂಡದ ವಿರುದ್ಧ ಘೋಷಣೆ ಕೂಗಿದ್ದ ಕೆಲವು ಪ್ರತಿಭಟನಕಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರ್‌ಎಎಫ್‌ ತುಕಡಿ ಪ್ರತಿಭಟನಾ ಸ್ಥಳಕ್ಕೆ ಬಂದಿಳಿದಾಗ ಅಲ್ಲಿದ್ದ ಕೆಲವರು, ‘ಗೋ ಬ್ಯಾಕ್‌’ ಎಂದು ಘೋಷಣೆಗಳನ್ನು ಕೂಗಿದ್ದರು. ಅವರ ವಿರುದ್ಧ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 353ರ (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ) ಅಡಿಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

‘ಘೋಷಣೆ ಕೂಗಿದವರ ಪೂರ್ಣ ವಿವರ ಲಭ್ಯವಾಗಿಲ್ಲ. 50 ಜನರ ಗುಂಪು ಆರ್‌ಎಎಫ್‌ ಸಿಬ್ಬಂದಿಯ ವಿರುದ್ಧ ಘೋಷಣೆ ಕೂಗಿ, ಕರ್ತವ್ಯಕ್ಕೆ ಅಡ್ಡಿಪಡಿಸಿದೆ. ಪೊಲೀಸ್‌ ಸಿಬ್ಬಂದಿಯ ದೂರನ್ನು ಆಧರಿಸಿ, ಅವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು