ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ‘ಅಂತ್ಯೋದಯ’ ಕಾರ್ಯಾಗಾರ ಅ.4ಕ್ಕೆ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ
Last Updated 1 ಅಕ್ಟೋಬರ್ 2021, 10:56 IST
ಅಕ್ಷರ ಗಾತ್ರ

ಮಂಗಳೂರು: ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ‘ಅಂತ್ಯೋದಯ’ ಕಾರ್ಯಾಗಾರವು ಅ.4ರ ಬೆಳಿಗ್ಗೆ 10 ಗಂಟೆಗೆ ಬಂಟ್ವಾಳದ ಬಂಟರ ಸಭಾಭವನದಲ್ಲಿ ನಡೆಯಲಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಾಗಾರದ ಕುರಿತು ಮಾಹಿತಿ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಚುವಲ್ ಮೂಲಕ ಭಾಗವಹಿಸುವರು. ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹಾಗೂ ಮೀನುಗಾರಿಕೆ ಸಚಿವ ಎಸ್. ಅಂಗಾರ ಭಾಗವಹಿಸುವರು. ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸುವರು. ಸಂಸದ ನಳಿನ್‌ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಸ್ಥಳೀಯ ಶಾಸಕರು, ನಿಗಮ–ಮಂಡಳಿಗಳ ಅಧ್ಯಕ್ಷರು ಭಾಗವಹಿಸುವರು. ಸಂಬಂಧಪಟ್ಟ ಇಲಾಖೆಗಳ ರಾಜ್ಯ ಮಟ್ಟದ ಅಧಿಕಾರಿಗಳು ಪಾಲ್ಗೊಂಡು, ಮಾಹಿತಿ ಹಂಚಿಕೊಳ್ಳುವರು ಎಂದರು.

ಬೆಳಗಿನ ಅವಧಿಯಲ್ಲಿ ಸಭಾ ಕಾರ್ಯಕ್ರಮ, ನಂತರ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ, ಸಂವಾದ ನಡೆಯಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT