ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಜಿರೆ: ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಗಮನ ಹರಿಸಲು ಮನವಿ

Published : 29 ಆಗಸ್ಟ್ 2024, 13:42 IST
Last Updated : 29 ಆಗಸ್ಟ್ 2024, 13:42 IST
ಫಾಲೋ ಮಾಡಿ
Comments

ಉಜಿರೆ: ಸಮಾಜಕಲ್ಯಾಣ ಇಲಾಖೆಯ ಜತೆ ಸರ್ಕಾರದ ಇತರ ಇಲಾಖೆಗಳ ಅಧಿಕಾರಿಗಳೂ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಗಮನಹರಿಸಬೇಕು ಎಂದು ಕೊರಗ ಸಮುದಾಯದ ಮುಖಂಡ ಸುಂದರ ಹೇಳಿದರು.

ಮುಂಡಾಜೆಯ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ನಡೆದ ಬುಡಕಟ್ಟು ಸಮುದಾಯಗಳ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೊರಗ ಸಮುದಾಯದ ಮೂಲಭೂತ ದಾಖಲೆಗಳಿಲ್ಲದೆ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು.

ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ ಮಾತನಾಡಿ, ಕೊರಗ ಸಮಾಜದವರಿಗೆ ಆಧಾರ್, ಪಡಿತರ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಮುಂಡಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ ಬಂಗೇರ ಅಧ್ಯಕ್ಷತೆ ವಹಿಸಿದ್ದರು.

ಅರ್ಹ ಫಲಾನುಭವಿಗಳಿಗೆ ದಾಖಲೆ ವಿತರಿಸಲಾಯಿತು. ಸಮಾಜಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಹೇಮಲತಾ, ರಾಮಣ್ಣ ಶೆಟ್ಟಿ, ಮುಂಡಪ್ಪ ಭಾಗವಹಿಸಿದ್ದರು.

ದಾಖಲೆ ಪತ್ರ ವಿತರಿಸಲಾಯಿತು
ದಾಖಲೆ ಪತ್ರ ವಿತರಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT