ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡಿಕೆ ಹಳದಿ ಎಲೆ ರೋಗ ಸಂತ್ರಸ್ತ ರೈತರ ಹಕ್ಕೊತ್ತಾಯ ಮಂಡನೆ

Published 20 ಏಪ್ರಿಲ್ 2024, 5:00 IST
Last Updated 20 ಏಪ್ರಿಲ್ 2024, 5:00 IST
ಅಕ್ಷರ ಗಾತ್ರ

ಬಂಟ್ವಾಳ: ಅಡಿಕೆ ಹಳದಿ ಎಲೆ ರೋಗ ಸಂತ್ರಸ್ತ ರೈತರ ಹಕ್ಕೊತ್ತಾಯ ಮಂಡನೆ ಮತ್ತು ತಾಂತ್ರಿಕ ಕಾರ್ಯಾಗಾರ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ರಾಜ್ಯ ರೈತಸಂಘ, ಯುವ ಘಟಕ ಮತ್ತು ಪೃಥ್ವಿ ಪ್ರತಿಷ್ಠಾನದಿಂದ ನಡೆದ ಕಾರ್ಯಕ್ರಮದಲ್ಲಿ ಕೃಷಿ ಆರ್ಥಿಕ ತಜ್ಞ ಮತ್ತು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ವಿಷಯ ಮಂಡನೆ ಮಾಡಿದರು.

ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ಹಣಕಾಸು ಮತ್ತು ಆರ್ಥಿಕ ತಜ್ಞ ಜೀವಿಸುಂದರ್, ಯುವ ಘಟಕದ ರಾಜ್ಯ ಸಂಚಾಲಕ ಆದಿತ್ಯನಾರಾಯಣ ಕೊಲ್ಲಾಜೆ, ಜಿಲ್ಲಾ ಸಂಘದ ಅಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫರ್ನಾಂಡಿಸ್‌, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್, ಕಾರಮಿಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ವಿಟ್ಲ, ಜಿಲ್ಲಾ ಘಟಕದ ಕಾರ್ಯದರ್ಶಿ ಡಿ.ಕೆ.ಶಾಹುಲ್ ಹಮೀದ್, ನಾರಾಯಣ ಸ್ವಾಮಿ ಭಾಗವಹಿಸಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT