ಮಂಗಳೂರು: ಐ.ಸಿ.ಎ.ಆರ್-ಸಿ.ಪಿ.ಸಿ.ಆರ್.ಐ ನೇತೃತ್ವದಲ್ಲಿ ಅಡಿಕೆ ಕೃಷಿಕರ ತೋಟಗಳಲ್ಲಿ ಸಮುದಾಯ ಮಟ್ಟದಲ್ಲಿ ಎಲೆಚುಕ್ಕೆ ರೋಗ ನಿರ್ವಹಣಾ ಕ್ರಮಗಳ ಪ್ರಾತ್ಯಕ್ಷಿಕೆಗೆ ಒಂದು ವರ್ಷವಾಗುತ್ತಿರುವ ಪ್ರಯುಕ್ತ ಸುಳ್ಯದ ಗುತ್ತಿಗಾರು ಸಹಕಾರ ಸಂಘದ ಸಭಾಭವನದಲ್ಲಿ ಸಂವಾದ ಕಾರ್ಯಕ್ರಮವನ್ನು ಏ.29ರಂದು 11 ಗಂಟೆಗೆ ಆಯೋಜಿಸಲಾಗಿದೆ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅತಿಥಿಯಾಗಿ ಭಾಗವಹಿಸುವರು.

ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ನಿಯಂತ್ರಣಕ್ಕೆ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ರೈತರ ತೋಟದಲ್ಲಿ ಪ್ರಾತ್ಯಕ್ಷಿಕೆ ನಡೆಸಲಾಗುತ್ತಿದೆ. ರೋಗ ನಿರ್ವಹಣೆಗೆ ಔಷಧ ಸಿಂಪಡಣೆಯೊಂದೇ ಪರಿಹಾರವಲ್ಲ. ಸಾಮೂಹಿಕ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವುದು, ತೀವ್ರವಾದ ಎಲೆಗಳನ್ನು ತೆಗೆದು ನಾಶ ಮಾಡುವುದು ಹಾಗೂ ಅಡಿಕೆ ಮರದ ಆರೋಗ್ಯವನ್ನು ಉತ್ತಮಗೊಳಿಸುವುದು ಬಹುಮುಖ್ಯ ಎಂದು ಸಿಪಿಸಿಆರ್ಐ ನಿರ್ದೇಶಕ ಕೆ ಬಾಲಚಂದ್ರ ಹೆಬ್ಬಾರ್ ಹೇಳಿದ್ದಾರೆ.

ಈ ಬಗ್ಗೆ ಅರಿವು ಮೂಡಿಸಲು ಹಾಗೂ ಚರ್ಚಿಸಲು ಸಂವಾದ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-51-383757654

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.