ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್-ಬಿಜೆಪಿ ಮುಖಂಡರ ನಡುವೆ ವಾಗ್ವಾದ

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವೀಕ್ಷಣೆಗೆ ಅಡ್ಡಿ ಆರೋಪ
Last Updated 30 ಜನವರಿ 2021, 10:15 IST
ಅಕ್ಷರ ಗಾತ್ರ

ಬಂಟ್ವಾಳ:ಇಲ್ಲಿನ ಸರಪಾಡಿಯಲ್ಲಿ ಅನುಷ್ಠಾನಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ಮತ್ತು ತಳ್ಳಾಟ ನಡೆಸಿದ ಘಟನೆ ಶನಿವಾರ ನಡೆದಿದೆ.

ಈ ಯೋಜನೆಯನ್ನು ರಾಜ್ಯ ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಭಾನುವಾರ ಬೆಳಿಗ್ಗೆ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಿಸಿ ಬಿಜೆಪಿ ಮುಖಂಡರು ಭಾರೀ ಸಿದ್ದತೆ ನಡೆಸುತ್ತಿದ್ದರು. ಇನ್ನೊಂದೆಡೆ ಇಲ್ಲಿಗೆಈಯೋಜನೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಅನುಷ್ಠಾನಗೊಳಿಸಿದ್ದಾರೆ.

ಇದಕ್ಕಾಗಿ ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ನೇತೃತ್ವದಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು‌ ಶನಿವಾರ ಬೆಳಿಗ್ಗೆ ವೀಕ್ಷಣೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಯೋಜನೆ ಉದ್ಘಾಟನೆಗೆ ಬಂದಿದ್ದಾರೆ ಎಂದು ಆರೋಪಿಸಿ ಅಲ್ಲಿನ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರುಆಕ್ಷೇಪ ವ್ಯಕ್ತಪಡಿಸಿದರು.

ಇದರಿಂದಾಗಿ ಎರಡೂ ಪಕ್ಷದ ಕಾರ್ಯಕರ್ತರು ಜಮಾಯಿಸಿದರು. ತಕ್ಷಣವೇ ನಗರ ಠಾಣೆ ಪೊಲೀಸರು ಬಂದು ಯೋಜನಾ ಘಟಕದ ಗೇಟ್ ಹಾಕಿ ತಡೆದರು. ಇದೇ ವೇಳೆ ಎರಡೂ ಪಕ್ಷಗಳ ಪ್ರಮುಖರು ಮತ್ತು ಕಾರ್ಯಕರ್ತರ ನಡುವೆ ಪರಸ್ಪರ ಮಾತಿನ ಚಕಮಕಿ ಮತ್ತು ತಳ್ಳಾಟ ನಡೆದಿದೆ. ಈ ನಡುವೆ ಮಾಜಿ ಸಚಿವ ರೈ ಸಹಿತ ಪ್ರಮುಖರಾದ ಬೇಬಿ ಕುಂದರ್, ಚಂದ್ರಪ್ರಕಾಶ ಶೆಟ್ಟಿ, ಬಿ.ಪದ್ಮಶೇಖರ ಜೈನ್ ಸಹಿತ ಕಾರ್ಯಕರ್ತರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT