ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್: ಮಂಗಳೂರಿನ ಅರ್ಜುನ್‌ ಕಿಶೋರ್‌ ಪ್ರಥಮ ರ‍್ಯಾಂಕ್‌

Published 4 ಜೂನ್ 2024, 23:32 IST
Last Updated 4 ಜೂನ್ 2024, 23:32 IST
ಅಕ್ಷರ ಗಾತ್ರ

ಮಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್–ಯುಜಿ) ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ (720ಕ್ಕೆ 720 ಅಂಕ) ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.

‘ನೀಟ್‌ನಲ್ಲಿ ಉತ್ತಮ ಫಲಿತಾಂಶ ನಿರೀಕ್ಷಿಸಿದ್ದೆ, ಆದರೆ, ಪ್ರಥಮ ರ್‍ಯಾಂಕ್‌ ನಿರೀಕ್ಷಿಸಿರಲಿಲ್ಲ. ದೆಹಲಿಯ ಏಮ್ಸ್‌ನಲ್ಲಿ ವೈದ್ಯಕೀಯ ಶಿಕ್ಷಣ ಓದುವುದು ನನ್ನ ಕನಸಾಗಿತ್ತು. ಕಾಲೇಜು ವೇಳಾಪಟ್ಟಿಯನ್ನು ಚಾಚೂತಪ್ಪದೆ
ಅನುಸರಿಸುತ್ತಿದ್ದೆ. ಯಾವುದೇ ಅನುಮಾನ ಇದ್ದರೂ ಉಪನ್ಯಾಸಕರು ಪರಿಹರಿಸುತ್ತಿದ್ದರು. ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯ ಓದು ಗುರಿ ಸಾಧನೆಗೆ ಸಹಕಾರಿಯಾಯಿತು’ ಎಂದು ಅರ್ಜುನ್ ಪ್ರತಿಕ್ರಿಯಿಸಿದರು.

ಅರ್ಜುನ್ ತಂದೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಫಾರ್ಮಕಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕಿಶೋರ್ ಮತ್ತು ಸ್ತ್ರೀರೋಗ ತಜ್ಞೆ ಡಾ. ರಶ್ಮಿ ಅವರ ಪುತ್ರ ಅರ್ಜುನ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 99.8 ಅಂಕ ಗಳಿಸಿದ್ದರು.

‘ಕಠಿಣ ಪರಿಶ್ರಮವೇ ಯಶಸ್ಸು ಎಂಬುದು ಎಕ್ಸ್‌ಪರ್ಟ್ ಕಾಲೇಜಿನ ಧ್ಯೇಯವಾಕ್ಯವಾಗಿದ್ದು, ಪರಿಶ್ರಮವಿದ್ದರೆ ಯಶಸ್ಸು ಖಂಡಿತ ಸಿಗುತ್ತದೆ. ವಿದ್ಯಾರ್ಥಿಯ ಶ್ರಮ, ಪಾಲಕರು, ಉಪನ್ಯಾಸಕರು, ಕಾಲೇಜಿನ ವಾತಾವರಣದಿಂದ ಇದು ಸಾಧ್ಯವಾಗಿದೆ’ ಎಂದು ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಪ್ರೊ. ನರೇಂದ್ರ ಎಲ್. ನಾಯಕ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT