ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಂಡಾಣ ದೈವಸ್ಥಾನದ ಸಿಸಿಟಿವಿ ಕ್ಯಾಮೆರಾ ಕಳವು: ಆರೋಪಿ ಬಂಧನ

Published 7 ಏಪ್ರಿಲ್ 2024, 4:37 IST
Last Updated 7 ಏಪ್ರಿಲ್ 2024, 4:37 IST
ಅಕ್ಷರ ಗಾತ್ರ

ಉಳ್ಳಾಲ: ಕೋಟೆಕಾರು ಗ್ರಾಮದ ಕೊಂಡಾಣ ಕ್ಷೇತ್ರದ ಭಂಡಾರ ಮನೆ ಧ್ವಂಸ ಪ್ರಕರಣದ ಬಳಿಕ ಕ್ಷೇತ್ರಕ್ಕೆ ಅಳವಡಿಸಲಾಗಿದ್ದ ಆರು ಸಿಸಿ ಕ್ಯಾಮೆರಾಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೀರಿ ಕೊಂಡಾಣ ನಿವಾಸಿ ಶುಭಾಶ್ ಚಂದ್ರ (37) ಎಂದು ಗುರುತಿಸಲಾಗಿದ್ದು, ಕಳವು ಮಾಡಿರುವ ಸಿಸಿಟಿವಿ ಕ್ಯಾಮೆರಾಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕ್ಷೇತ್ರಕ್ಕೆ ಅಳವಡಿಸಲಾದ ಕ್ಯಾಮೆರಾಗಳು ಕಳವಾಗಿರುವ ಘಟನೆ ಗುರುವಾರ ಗೊತ್ತಾಗಿತ್ತು. ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆನಂದ್ ಅವರು‌ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಕ್ಯಾಮೆರಾ ಕಳವು ಮಾಡಿದ ಆರೋಪಿಯ ಚಹರೆ ಕೊಂಡಾಣ ಕ್ಷೇತ್ರದ ಕಚೇರಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಮಾನಸಿಕ ರೋಗಿಯಾಗಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT