ಬುಧವಾರ, ಮಾರ್ಚ್ 3, 2021
18 °C

ಮಂಗಳೂರು: ಮಕ್ಕಳ ಅಪಹರಣ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಕ್ಕಳ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾ ದೃಶ್ಯವನ್ನು ಆಧರಿಸಿ 3 ಮಂದಿಯನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಕ್ಷಿತ್ ಶೆಟ್ಟಿ, ರಾಹುಲ್ ಸಿನ್ಹಾ, ಅಲಿಸ್ಟಾರ್ ಎಂಬುವರನ್ನು ಬಂಧನ ಮಾಡಲಾಗಿದೆ. ಈ ಮೂವರು  ಮಕ್ಕಳನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು ಅಪಹರಣ ಮಾಡಲು ಯತ್ನಿಸಿದ್ದು, ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಭಾಗಿ ಆಗಿರುವ ಮೂವರ ವಿರುದ್ದ ಹಿಂದೆ ಕೂಡ ಪ್ರಕರಣ ದಾಖಲಾಗಿವೆ ಎಂದು ತಿಳಿಸಿದರು.

ಡ್ರಗ್ ಪ್ರಕರಣಗಳಲ್ಲಿ ಕೂಡ ಇವರು ಇದ್ದಾರೆ. ಪ್ರಕರಣದ ಪತ್ತೆಗೆ ತಂಡವನ್ನು ರಚನೆ ಮಾಡಲಾಗಿತ್ತು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು.

ಉಳ್ಳಾಲದಲ್ಲಿ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಂಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧನ ಮಾಡಲಾಗಿದೆ.
ಆರೋಪಿ ನಾಗರಾಜ ಎಂದು ಗುರುತಿಸಲಾಗಿದೆ. ಮಾಂಸವನ್ನು ಹೆಚ್ಚಿಗೆ ನೀಡಲಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ನಡೆಸಿದ್ದಾನೆ ಎಂದು ತಿಳಿಸಿದರು. ಡಿಸಿಪಿ ಹರಿರಾಮ್ ಶಂಕರ್ ಇದ್ದರು

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು