ಸೋಮವಾರ, ಜೂಲೈ 13, 2020
23 °C

ಮಹಾವೀರ ಹೆಸರಿಗೆ ಅವಮಾನಿಸಿದವರ ಬಂಧಿಸಿ : ಖಾದರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ಪಂಪ್ ವೆಲ್ ವೃತ್ತಕ್ಕೆ 'ಸಾವರ್ಕರ್' ಹೆಸರು ಎಂದು ಬ್ಯಾನರ್ ಹಾಕುವ ಮೂಲಕ ಕಿಡಿಗೇಡಿಗಳು ನಾಡಿಗೆ ಅವಮಾನ ಮಾಡಿದ್ದಾರೆ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದ್ದಾರೆ.

ನಗರದ ಪಂಪ್ ವೆಲ್ ವೃತ್ತಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ 'ಮಹಾವೀರ' ವೃತ್ತ ಎಂದು ನಾಮಕರಣ ಮಾಡಲಾಗಿದೆ. ಈ ವೃತ್ತಕ್ಕೆ 'ಸಾವರ್ಕರ್' ಹೆಸರು ಎಂದು ಬ್ಯಾನರ್ ಹಾಕುವ ಮೂಲಕ ಕಿಡಿಗೇಡಿಗಳು ನಾಡಿಗೆ ಅವಮಾನ ಮಾಡಿದ್ದಾರೆ. ಈ ಕಿಡಿಗೇಡಿಗಳನ್ನು  ಕೂಡಲೇ ಬಂಧಿಸಬೇಕು. ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡಿದ ಮುಖಂಡರು, ಸಂಘಟನೆ, ಬ್ಯಾನರ್ ಮುದ್ರಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದರು.

'ಕಿಡಿಗೇಡಿಗಳನ್ನು ಬಂಧಿಸಲು ಕ್ರಮಕೈಗೊಳ್ಳದಿದ್ದರೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರೂ ಈ ಕುಮ್ಮಕ್ಕಿನಲ್ಲಿ ಭಾಗೀದಾರರು ಎಂದು ಭಾವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು