ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಬಳಬೆಟ್ಟು: ಆರ್ಟ್ ಆಫ್ ಪೇರೆಂಟಿಂಗ್

Published 8 ಜೂನ್ 2024, 13:28 IST
Last Updated 8 ಜೂನ್ 2024, 13:28 IST
ಅಕ್ಷರ ಗಾತ್ರ

ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್‌ನಲ್ಲಿ ಮಕ್ಕಳ ಹೆತ್ತವರ ಸಭೆ (ಆರ್ಟ್ ಆಫ್ ಪೇರೆಂಟಿಂಗ್) ಮಾಣಿಯ ಜನಪ್ರಿಯ ಗಾರ್ಡನ್‌ನಲ್ಲಿ ನಡೆಯಿತು.

ಜನಪ್ರಿಯ ಫೌಂಡೇಷನ್ ಚೇರ್‌ಮನ್ ಡಾ.ಅಬ್ದುಲ್ ಬಶೀರ್ ವಿ.ಕೆ. ಕಾರ್ಯಕ್ರಮ ಉದ್ಘಾಟಿಸಿದರು.

ವ್ಯಕ್ತಿಗೆ ಮೌಲ್ಯಾಧಾರಿತ ಶಿಕ್ಷಣ ಮತ್ತು ಉತ್ತಮ ಆರೋಗ್ಯ ಇದ್ದರೆ ಆತ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ. ಜನಪ್ರಿಯ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಈ ಎರಡೂ ಕಾರ್ಯಗಳನ್ನು ವ್ಯವಸ್ಥಿತವಾಗಿ ಮಾಡುತ್ತಿದೆ ಎಂದರು.

ಫೌಂಡೇಷನ್‌ ಅಧ್ಯಕ್ಷೆ ಫಾತಿಮಾ ನಸ್ರೀನ ಬಶೀರ್ ಮಾತನಾಡಿ, ಶಿಕ್ಷಕರು ಮತ್ತು ಹೆತ್ತವರು ಮಕ್ಕಳ ಕಲಿಕೆಗೆ ಒತ್ತು ನೀಡಿದಾಗ ಮಕ್ಕಳು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯವಾಗುತ್ತದೆ ಎಂದರು.

ತರಬೇತುಗಾರ್ತಿ ಸಜಸ್ ಕೆ.ಜೆ. ಮಾತನಾಡಿದರು.

ಜನಪ್ರಿಯ ಸೆಂಟ್ರಲ್ ಸ್ಕೂಲ್ ನಿರ್ದೇಶಕ ಎ.ಆರ್.ನೌಶೀನ್ ಬದ್ರಿಯಾ, ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್, ಪ್ರಾಂಶುಪಾಲ ಲಿಬಿನ್ ಕ್ಸೇವಿಯರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT