ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾಕಿರಣ: 2ನೇ ಹಂತದ ಕಾರ್ಯಕ್ರಮಕ್ಕೆ ಚಾಲನೆ ಇಂದು

Published 18 ಫೆಬ್ರುವರಿ 2024, 0:27 IST
Last Updated 18 ಫೆಬ್ರುವರಿ 2024, 0:27 IST
ಅಕ್ಷರ ಗಾತ್ರ

ಮಂಗಳೂರು: ಎಲ್ಲ ವಯಸ್ಸಿನವರಿಗೆ ಕಣ್ಣಿನ ತಪಾಸಣೆ ಮಾಡುವ ‘ಆಶಾಕಿರಣ’ 2ನೇ ಹಂತದ ಕಾರ್ಯಕ್ರಮಕ್ಕೆ ಫೆ. 18ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಪಾಸಣಾ ಅಭಿಯಾನ ನಡೆಯಲಿದೆ ಎಂದರು. 

‘ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಹಾವೇರಿ, ಚಾಮರಾಜನಗರ ಜಿಲ್ಲೆಗಳಲ್ಲಿ ಒಟ್ಟು 56.59 ಲಕ್ಷ ಜನರನ್ನು ತಪಾಸಣೆ ಮಾಡಲಾಗಿದ್ದು, ಇವರಲ್ಲಿ 8.28 ಲಕ್ಷ ಜನರಿಗೆ ನೇತ್ರ ಸಂಬಂಧಿ ತೊಂದರೆ ಇರುವುದು ಗಮನಕ್ಕೆ ಬಂದಿದೆ. ದ್ವಿತೀಯ ಹಂತದ ತಪಾಸಣೆಗೆ ಒಳಪಡಿಸಿದಾಗ 2.45 ಲಕ್ಷ ಮಂದಿಗೆ ದೃಷ್ಟಿದೋಷ ಕಂಡುಬಂದಿದ್ದು, ಅವರಿಗೆ ಉಚಿತವಾಗಿ ಕನ್ನಡಕಗಳನ್ನು ಒದಗಿಸಲಾಗುತ್ತದೆ. 39,336 ಜನರಿಗೆ ಕಣ್ಣಿನ ಪೊರೆ ಸಮಸ್ಯೆ ಇರುವುದು ಕಂಡುಬಂದಿದ್ದು, ಅವರಿಗೆ ಸರ್ಕಾರಿ ಆಸ್ಪತ್ರೆ ಅಥವಾ ನೋಂದಾಯಿತ ಸ್ವಯಂ ಸೇವಾ ಸಂಸ್ಥೆಗಳ ಆಸ್ಪತ್ರೆಗಳಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಲಾಗುತ್ತದೆ. ಬರುವ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಈ ಯೋಜನೆ ವಿಸ್ತರಿಸಲಾಗುವುದು’ ಎಂದು ಹೇಳಿದರು.

ಕ್ಯಾನ್ಸರ್‌ ರೋಗಿಗಳ ಅನುಕೂಲಕ್ಕೆ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಸೆಂಟರ್ ತೆರೆಯಲಾಗುವುದು. ‘ನಮ್ಮ ಕ್ಲಿನಿಕ್‌’ಗಳಿಗೆ ಬೇಡಿಕೆ ಇದ್ದು, ಹೆಚ್ಚಿಸುವ ಯೋಚನೆ ಇದೆ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT