ಪುತ್ತೂರು: ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳು ದುಶ್ಚಟಗಳ ಬಗ್ಗೆ ಗಮನ ಹರಿಸುವುದಿಲ್ಲ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವ ಕೆಲಸ ಮಾಡಬೇಕು. ಮಕ್ಕಳಿಗೆ ಆಹಾರ ಪದ್ಧತಿ ಕುರಿತು ಕೌನ್ಸಿಲಿಂಗ್ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ಶಿಬಿರಗಳನ್ನು ನಡೆಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ತಾಲ್ಲೂಕಿನ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಯ 17ರ ವಯೋಮಾನದ ವಿದ್ಯಾರ್ಥಿಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದ ಮಕ್ಕಳು ಕ್ರೀಡೆಯಲ್ಲಿ ಮುಂದೆ ಬರಬೇಕು ಎನ್ನುವ ನಿಟ್ಟಿನಲ್ಲಿ ಮುಂಡೂರಿನಲ್ಲಿ 15 ಎಕರೆ ಜಾಗದಲ್ಲಿ ಸಿಂಥೆಟಿಕ್ ಟ್ರಾಕ್ ಒಳಗೊಂಡ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದೆ. ಕೊಂಬೆಟ್ಟು ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನಿ ನಡೆಸಲು ₹1 ಕೋಟಿ ವೆಚ್ಚದಲ್ಲಿ ಹೊನಲು ಬೆಳಕಿನ ವ್ಯವಸ್ಥೆ, ₹1 ಕೋಟಿ ವೆಚ್ಚದಲ್ಲಿ ಜಿಮ್ ವ್ಯವಸ್ಥೆ, ಬ್ಯಾಡ್ಮಿಂಟನ್ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ. ಜಯರಾಮ ರೈ ಬಳಜ್ಜ ಧ್ವಜಾರೋಹಣ ನೆರವೇರಿಸಿದರು. ಪಂಚಾಯಿತಿ ಮಾಜಿ ಕಾರ್ಯದರ್ಶಿ ಬಾಲಕೃಷ್ಣ ರೈ ನೆಟ್ಟಾಳ, ಪ್ರಗತಿಪರ ಕೃಷಿಕ ಸಂತೋಷ್ ರೈ ಇಳಂತಾಜೆ ಕ್ರೀಡಾಜ್ಯೋತಿ ಬೆಳಗಿದರು. ಕೆಯ್ಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶರತ್ ಕುಮಾರ್ ಮಾಡಾವು ಕ್ರೀಡಾಕೂಟ ಉದ್ಘಾಟಿಸಿದರು. ಕೆಪಿಎಸ್ ಪ್ರಾಂಶುಪಾಲೆ ಹಸೀನಾ ಬಾನು ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಾಧ್ಯಕ್ಷ ಎ.ಕೆ. ಜಯರಾಮ ರೈ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿ ನವೀನ್ ಸ್ಟೀವನ್ ವೇಗಸ್, ಕೆಯ್ಯೂರು ಗ್ರಾಮ ಪಂಚಾಯಿತಿ ಸದಸ್ಯರಾದ ಜಯಂತ ಪೂಜಾರಿ ಕೆಂಗುಡೇಲು, ಮೀನಾಕ್ಷಿ ವಿ.ರೈ, ಅಬ್ದುಲ್ ಖಾದರ್ ಮೇರ್ಲ, ಸವಣೂರು ವಲಯದ ನೋಡೆಲ್ ಅಧಿಕಾರಿಗಳಾದ ಬಾಲಕೃಷ್ಣ, ಕೃಷ್ಣಪ್ರಸಾದ್, ದೈಹಿಕ ಶಿಕ್ಷಣ ಶಿಕ್ಷಕರಾದ ಮಾಮಚ್ಚನ್ ಎಂ, ಮೋನಪ್ಪ ಪಟ್ಟೆ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಮಿತ್ ರಾಜ್, ಕೆಯ್ಯೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ರೈ ದೇರ್ಲ, ಉಮಾಕಾಂತ್ ಬೈಲಾಡಿ, ದಾಮೋದರ ಪೂಜಾರಿ ಕೆಂಗುಡೇಲು ಭಾಗವಹಿಸಿದ್ದರು.

ಕೆಪಿಎಸ್ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕ ಬಾಬು ಎಂ. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಇಂದಿರಾ ಪಿ. ವಂದಿಸಿದರು. ಕೆಪಿಎಸ್ ಉಪ ಪ್ರಾಂಶುಪಾಲ ಕೆ.ಎಸ್. ವಿನೋದ್ ಕುಮಾರ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.