ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿಯಿಂದ ಘನತೆಗೆ ವಿರುದ್ಧವಾದ ಮಾತು: ಅಶ್ವಿನ್ ಕುಮಾರ್ ರೈ

Published 25 ಏಪ್ರಿಲ್ 2024, 3:51 IST
Last Updated 25 ಏಪ್ರಿಲ್ 2024, 3:51 IST
ಅಕ್ಷರ ಗಾತ್ರ

ಮಂಗಳೂರು: ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಸಮುದಾಯವನ್ನು ನುಸುಳುಕೋರರು ಎಂದು ಹೇಳಿದ್ದು ಸಮಂಜಸವೇ? ಪ್ರಧಾನಿ ಹುದ್ದೆಯ ಘನತೆಗೆ ವಿರುದ್ಧವಾಗಿ ಅವರು ಮಾತನಾಡಿದ್ದಾರೆ ಎಂದು ಎಐಸಿಸಿ ಸಂವಹನ ಸಂಯೋಜಕ (ವಾರ್‌ ರೂಂ) ಅಶ್ವಿನ್ ಕುಮಾರ್ ರೈ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 2006ರಲ್ಲಿ ನೀಡಿರುವ ಹೇಳಿಕೆಯ ತುಣುಕೊಂದನ್ನು ಪ್ರಧಾನಿ ಈಗ ತಮ್ಮ ಚುನಾವಣಾ ಪ್ರಚಾರದಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಸಂದರ್ಭದಲ್ಲಿ ಬಂದ ವರದಿಯೊಂದನ್ನು ಆಧರಿಸಿ, ಮನಮೋಹನ್ ಸಿಂಗ್ ಅವರು, ಪರಿಶಿಷ್ಟ ಜಾತಿ- ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಆರ್ಥಿಕವಾಗಿ ಹಿಂದುಳಿದವರಿಗೆ ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದರ ಒಂದು ವಾಕ್ಯವನ್ನು ಬಳಸಿ, ಜನರಿಗೆ ತಪ್ಪು ಸಂದೇಶ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.

ದೇಶದಲ್ಲಿ ಎದುರಾಗಿರುವ ನಿರುದ್ಯೋಗ ಸಮಸ್ಯೆ, ಬಡತನ, ಸಂಪತ್ತಿನ ಅಸಮಾನ ಹಂಚಿಕೆಯ ಬಗ್ಗೆ ಪ್ರಧಾನಿ ಮಾತನಾಡುತ್ತಿಲ್ಲ. ಒಂದು ಸಮುದಾಯವನ್ನು ಗುರಿಯಾಗಿಟ್ಟು ಮಾತನಾಡಿದರೆ, ಆ ಸಮುದಾಯ ಮುಖ್ಯವಾಹಿನಿಗೆ ಬರುವುದಾದರೂ ಹೇಗೆ? ವಿಭಜನೆಯ ಮಾತು ರಾಷ್ಟ್ರದ ಏಕತೆಗೆ ಪೂರಕವಲ್ಲ. ಚುನಾವಣೆಯ ರಾಜಕೀಯಕ್ಕಾಗಿ ಈ ಮಟ್ಟಕ್ಕೆ ಇಳಿದು ಮಾತನಾಡಬಾರದು ಎಂದು ಅವರು ಹೇಳಿದರು.

ಪ್ರಮುಖರಾದ ಮಹಾಬಲ ಮಾರ್ಲ, ಶುಭೋದಯ ಆಳ್ವ, ನಝೀರ್ ಬಜಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT